ಬಿಜೆಪಿಗೆ ಮರಳಿ ಬರುವಂತೆ ನನ್ನ ಮೇಲೂ ಒತ್ತಡ ಹಾಕುತ್ತಿದ್ದಾರೆ. ಆದರೆ ಅಂತಿಮವಾಗಿ ತೆಗೆದುಕೊಳ್ಳುವವನು ನಾನು. ಈಗ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, “ಬಿಜೆಪಿ ನಾಯಕರಿಗೆ ಈಗ ಅವಶ್ಯಕತೆ ಹಾಗೂ ಅನಿವಾರ್ಯತೆಯಿದೆ. ಹೀಗಾಗಿ ಅವರು ನಮ್ಮನ್ನು ಪಕ್ಷಕ್ಕೆ ಮರಳಿ ಬರುವಂತೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ” ಎಂದರು.
“ಬಿಜೆಪಿಯ ಹಲವು ನಾಯಕರು ಹಾಗೂ ನನ್ನ ಆತ್ಮೀಯರು ಸಂಪರ್ಕದಲ್ಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನಿಂದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅನುಕೂಲವಾಗಿದೆ ಎಂಬುದು ಬಿಜೆಪಿಗೆ ಮನವರಿಕೆಯಾಗಿದೆ. ಹೇಗಾದ್ರೂ ಮಾಡಿ ನನ್ನನ್ನೂ ಮರಳಿ ತರಲು ತೆರೆ ಹಿಂದೆ ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದರು.