ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಆ.3ರಿದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಮಾತನಾಡಿದ ಪೊಲೀಸ್ ಆಯುಕ್ತರು, “ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡುತ್ತಾರೆ ಎಂಬುದು ಗೊತ್ತಿಲ್ಲ” ಎಂದರು.
ಬೆಂಗಳೂರು ನಗರದಲ್ಲಿ ಪ್ರತಿಭಟನೆ ರ್‍ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶ ಅನ್ವಯ ಪ್ರತಿಭಟನೆಗೆ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದೂ ಇದುವವರೆಗೆ ಅನುಮತಿ ಕೇಳಿಲ್ಲ” ಎಂದು ಸ್ಪಷ್ಟಪಡಿಸಿದರು.
8 ದಿನಗಳ 140 ಕಿ.ಮೀ. ಪಾದಯಾತ್ರೆ: ಸುನೀಲ್‌ಕುಮಾರ್
ಆ.3ರಿಂದ ಆ.10ರವರೆಗೆ ಮೈಸೂರು ಚಲೋ ಪಾದಯಾತ್ರೆಯ ರೂಪುರೇಷೆ ಅಂತಿಮ ಹಂತಕ್ಕೆ ಬಂದಿದೆ. 140 ಕಿ.ಮೀ. ಪಾದಯಾತ್ರೆ ಇದಾಗಿರುತ್ತದೆ. ಶನಿವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಲಿದೆ. 10ರಂದು ಬೆಳಿಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‌ಕುಮಾರ್ ತಿಳಿಸಿದ್ದಾರೆ.