Homeಕರ್ನಾಟಕಶಾಸಕ ಯತ್ನಾಳ್‌ಗೆ ಬಿಜೆಪಿ ಶೋಕಾಸ್‌ ನೋಟಿಸ್‌, ಯತ್ನಾಳ್‌ ಈ ಬಗ್ಗೆ ಹೇಳಿದ್ದೇನು?

ಶಾಸಕ ಯತ್ನಾಳ್‌ಗೆ ಬಿಜೆಪಿ ಶೋಕಾಸ್‌ ನೋಟಿಸ್‌, ಯತ್ನಾಳ್‌ ಈ ಬಗ್ಗೆ ಹೇಳಿದ್ದೇನು?

ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟ, ನನ್ನ ಬದ್ಧತೆ ಅಚಲವಾಗಿ ಇರಲಿದೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಕುಟುಂಬದ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಿರುವ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರಿಗೆ ಬಿಜೆಪಿ ಶೋಕಾಸ್‌ ನೋಟಿಸ್‌ ನೀಡಿದ ಬೆನ್ನಲ್ಲೇ ಅವರು ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ನಾನು ಉತ್ತರಿಸುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ತೆರದಿಡುವೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಹಾಗೂ ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ಸೋಮವಾರ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್​ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್‌ನಲ್ಲಿ, ಪಕ್ಷದ ರಾಜ್ಯ ಘಟಕದ ನಾಯಕತ್ವದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದೀರಿ. ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ, ಎಲ್ಲ ವಿಚಾರಗಳಲ್ಲಿಯೂ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾದ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುತ್ತಿದ್ದೀರಿ. ಅವೆಲ್ಲವೂ ಮಾಧ್ಯಮಗಳಲ್ಲಿ ಮತ್ತು ಇತರ ಪಕ್ಷಗಳ ವೇದಿಕೆಗಳಲ್ಲಿ ವರದಿಯಾಗಿವೆ ಎಂದು ಉಲ್ಲೇಖಿಸಲಾಗಿದೆ.

ಈ ಹಿಂದೆ ಹಲವು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ, ಪುನಃ ಆ ರೀತಿ ಮಾಡುವುದಿಲ್ಲ ಎಂದು ನೀವೇ ಭರವಸೆ ನೀಡಿದ್ದರೂ ಅಶಿಸ್ತು ಮುಂದುವರಿದಿರುವುದು ಕಳವಳದ ಸಂಗತಿ. ನಿಮ್ಮ ಹಿರಿತನ ಮತ್ತು ಪಕ್ಷದೊಂದಿಗಿನ ದೀರ್ಘಕಾಲಿನ ಸಂಬಂಧವವನ್ನು ಗಮನದಲ್ಲಿರಿಸಿ, ಪಕ್ಷದ ಕೇಂದ್ರ ಶಿಸ್ತು ಸಮಿತಿಯು ನಿಮ್ಮ ಹೇಳಿಕೆಗಳ ಬಗ್ಗೆ ಈ ಹಿಂದೆ ಮೃದು ನಿಲುವು ತಳೆದಿತ್ತು ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಕ್ರಮದ ಎಚ್ಚರಿಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments