Homeಕರ್ನಾಟಕನಿರಂತರವಾಗಿ ಜನರನ್ನು ಮೂರ್ಖರನ್ನಾಗಿಸಿದ ಬಿಜೆಪಿಯವರು ಈ ಬಾರಿ ಜನರ ಎದುರು ಮೂರ್ಖರಾಗುತ್ತಾರೆ: ಸಿದ್ದರಾಮಯ್ಯ

ನಿರಂತರವಾಗಿ ಜನರನ್ನು ಮೂರ್ಖರನ್ನಾಗಿಸಿದ ಬಿಜೆಪಿಯವರು ಈ ಬಾರಿ ಜನರ ಎದುರು ಮೂರ್ಖರಾಗುತ್ತಾರೆ: ಸಿದ್ದರಾಮಯ್ಯ

ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿಯದ್ದು ಅಭಿವೃದ್ಧಿ ಶೂನ್ಯ ಸಾಧನೆ. ಮೋದಿಯವರ ಸುಳ್ಳಿನ ಪಿಕ್ಚರ್ ಇನ್ನೂ ಬಾಕಿ ಇದೆ. ಸುಳ್ಳಿನ ಕನಸುಗಳನ್ನು ಬಿತ್ತುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸೀಟುಗಳವರೆಗೆ ಗೆದ್ದೇ ಗೆಲ್ಲುತ್ತದೆ. ಸೋಲುವ ಭಯಕ್ಕೆ ಒಳಗಾಗಿರುವ ಬಿಜೆಪಿಯವರು ಕರ್ನಾಟಕದಲ್ಲಿ ಬಿಜೆಪಿ 28 ಸೀಟುಗಳನ್ನು ಗೆಲ್ಲುತ್ತೇವೆ” ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.

ಬಿಜೆಪಿಯವರಿಗೆ ಸಂಸ್ಕಾರವಿಲ್ಲ

ಕೇಂದ್ರ ಗೃಹಸಚಿವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯರವರಿಗೆ ಸಂಸ್ಕಾರದ ಪಾಠವನ್ನು ಬಿಜೆಪಿ ಹೇಳುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿಯವರಿಗೆ ಸಂಸ್ಕಾರವಿಲ್ಲ. ಯತೀಂದ್ರ ಅವರು ಸಿಬಿಐನವರು ಕೊಟ್ಟಿರುವ ರಿಪೋರ್ಟ್ ಆಧಾರದ ಮೇಲೆ ಹೇಳಿಕೆಯನ್ನು ನೀಡಿದ್ದಾರೆಯೇ ಹೊರತು, ಅಮಿತ್ ಶಾ ಅವರಿಗೆ ಅವಮಾನ ಮಾಡುವ ಉದ್ದೇಶ ಅವರಿಗೆ ಇಲ್ಲ” ಎಂದರು.

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ

ಕಾಂಗ್ರೆಸ್ ಪಕ್ಷಕ್ಕೆ ಇತರೆ ಪಕ್ಷಗಳಿಂದ ಜನರು ಬರುವ ಸಾಧ್ಯತೆಯಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಜನರು ಸೇರ್ಪಡೆಯಾಗಲು ಉತ್ಸುಕರಿದ್ದಾರೆ. ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷದಲ್ಲಿ ಸ್ವಾಗತವಿದೆ” ಎಂದರು.

ಮೋದಿ ಸರ್ಕಾರದ ವೈಫಲ್ಯ

ರಾಜ್ಯದಲ್ಲಿ ಪ್ರಧಾನಿ ಮೋದಿಯವರು ರ್‍ಯಾಲಿ ಪ್ರಾರಂಭಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ” ವಿಧಾನಸಭಾ ಚುನಾವಣೆಯಲ್ಲಿಯೂ ಮೋದಿಯವರು ಪ್ರಚಾರ ಕೈಗೊಂಡಿದ್ದರೂ, ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ. ಕೇಂದ್ರದಲ್ಲಿ ಮೋದಿ ಸರ್ಕಾರದ ವೈಫಲ್ಯಗಳು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಖಾತ್ರಿಪಡಿಸಿದೆ” ಎಂದರು.

ಜನರ ಮೇಲೆ ಹೊರೆ

“2014 ರಲ್ಲಿ 47 ರೂ.ಗಳಿದ್ದ ಡೀಸೆಲ್ ಬೆಲೆ ಈಗ 97 ರೂಗಳಾಗಿದೆ. 77ರೂ.ಗಳಿದ್ದ ಪೆಟ್ರೋಲ್ ಬೆಲೆ ಈಗ 105ರೂ.ಗಳಾಗಿದೆ. ಅಡುಗೆ ಅನಿಲ ಬೆಲೆಯನ್ನು ಚುನಾವಣೆ ಸಂದರ್ಭ ದಲ್ಲಿ ಇಳಿಸಿದ್ದಾರೆ. ಈ ಬೆಲೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 414ರೂ.ಗಳಿತ್ತು. ನಮ್ಮ ಕಾಲಕ್ಕಿಂತಲೂ ಬಿಜೆಪಿ ಕಾಲದಲ್ಲಿ ಬೆಲೆ ಹೆಚ್ಚಾಗಿದೆ. ಕಚ್ಚಾ ತೈಲದ ಬೆಲೆ ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗ ಕಡಿಮೆಯಾಗಿದೆ. ಆ ಆಧಾರದಲ್ಲಿ ಇಂದನ ಬೆಲೆ ಕಡಿಮೆಯಾಗಬೇಕಿತ್ತು. ಯಾಕೆ ಮಾಡಿಲ್ಲ” ಎಂದು ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments