Homeಕರ್ನಾಟಕಬಿಜೆಪಿಯವರ ಆರೋಪಗಳು ಕುಚೇಷ್ಟೆ, ದುರುದ್ದೇಶದಿಂದ ಕೂಡಿವೆ ಅಷ್ಟೇ: ಎಂ ಬಿ ಪಾಟೀಲ್‌

ಬಿಜೆಪಿಯವರ ಆರೋಪಗಳು ಕುಚೇಷ್ಟೆ, ದುರುದ್ದೇಶದಿಂದ ಕೂಡಿವೆ ಅಷ್ಟೇ: ಎಂ ಬಿ ಪಾಟೀಲ್‌

ಕರ್ನಾಟದ ಬಿಜೆಪಿಗರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ; ನೀವು ಬೊಬ್ಬೆ ಹೊಡೆಯುತ್ತಿರುವಂತೆ 2023ರಲ್ಲಿ ಅಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಚುನಾವಣೆ ಖರ್ಚಿಗಾಗಿಯೂ ನಾನು ಸಾಲ ಮಾಡಿಲ್ಲ. ಅವೆಲ್ಲ ನಮ್ಮ ಕೌಟುಂಬಿಕ ವ್ಯವಹಾರ. ಅನೇಕ ಸಲ ಸಾಲ ಪಡೆದು, ವಾಪಸ್ ಕೂಡ ಕೊಟ್ಟಿದ್ದೇನೆ. ಬಾಕಿಯೂ ಇದೆ” ಎಂದಿದ್ದಾರೆ.

“ಬಿಜೆಪಿಯವರ ಆರೋಪಗಳು ಸತ್ಯಕ್ಕೆ ದೂರವಾದದ್ದು ಹಾಗೂ ಕುಚೇಷ್ಟೆ/ ದುರುದ್ದೇಶದಿಂದ ಕೂಡಿವೆ. ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ ಸರ್ಕಾರದ ತೀರ್ಮಾನಕ್ಕೂ ಯಾವ ಸಂಬಂಧವೂ ಇಲ್ಲ” ಎಂದು ಹೇಳಿದ್ದಾರೆ.

“2021ರಲ್ಲಿ ಬಿಜೆಪಿ ಸರ್ಕಾರವೇ ತನ್ನ ಆದೇಶದಲ್ಲಿ ನಿಗದಿಪಡಿಸಿದ್ದ ಹಂಚಿಕೆ ದರವನ್ನೇ ವಿಧಿಸಲಾಗಿದೆ. ಇದರಲ್ಲಿ ಯಾವುದೇ ರಿಯಾಯಿತಿ ನೀಡಿಲ್ಲ. ನಿವೇಶನ ಹಂಚಿಕೆಗೆ ಪರಿಗಣಿಸುವ ಮಾನದಂಡ ಸಂಸ್ಥೆಯ ಅರ್ಹತೆ, ಸಾಮರ್ಥ್ಯ, ಅನುಭವ ಇತ್ಯಾದಿಯೇ ಹೊರತು ವ್ಯಕ್ತಿ ನಿಷ್ಟ ಮಾನದಂಡಗಳಲ್ಲ” ಎಂದು ತಿಳಿಸಿದ್ದಾರೆ.

“ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಾಮೂಹಿಕ ಹಾಗೂ ಒಮ್ಮತದ ತೀರ್ಮಾನವೇ ಹೊರತು ವೈಯಕ್ತಿಕ ನಿರ್ಧಾರವಲ್ಲ. ಅಲ್ಲದೆ, ಬಾಗ್ಮನೆಗೆ 2005, 2006 ಮತ್ತು 2009ರಲ್ಲೆಲ್ಲ ಅಂದಂದಿನ ಸರ್ಕಾರಗಳು ಕೈಗಾರಿಕಾ ಭೂಮಿ ನೀಡಿವೆ. 2009ರಲ್ಲಿ ಇದೇ ಬಾಗ್ಮನೆ ಸಮೂಹದ ಚಂದ್ರಾ ಡೆವಲಪರ್ಸ್ ಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 25 ಎಕರೆ ಭೂಮಿ ನೀಡಿದ್ದಾಗ ನಿಮ್ಮದೇ ಸರ್ಕಾರ ಇತ್ತಲ್ಲವೇ” ಎಂದು ಪ್ರಶ್ನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments