Homeಕರ್ನಾಟಕಬಿಜೆಪಿಯ ಭ್ರಷ್ಟಾಚಾರ ಆರೋಪಕ್ಕೆ ಅಧಿವೇಶನದಲ್ಲಿ ಉತ್ತರಿಸುವೆ: ಸಿದ್ದರಾಮಯ್ಯ

ಬಿಜೆಪಿಯ ಭ್ರಷ್ಟಾಚಾರ ಆರೋಪಕ್ಕೆ ಅಧಿವೇಶನದಲ್ಲಿ ಉತ್ತರಿಸುವೆ: ಸಿದ್ದರಾಮಯ್ಯ

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ವಿಧಾನಸಭೆ ಅಧಿವೇಶನದಲ್ಲಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣ ಸರ್ಕಾರ ನಿರ್ಮಿಸುತ್ತಿದೆ” ಎಂದರು.

ಕಾಂಗ್ರೆಸ್‌ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿ ಹೇಳಿಕೆಗೆ ಉತ್ತರಿಸಿ, ” ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

“ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿ ಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ” ಎಂದರು

ಆತಂಕದಿಂದ ಅರ್ಥವಿಲ್ಲದ ಹೇಳಿಕೆಗಳು

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

“ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲ” ಎಂದು ಪ್ರಶ್ನಿಸಿದರು.

ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ” ಎಂದರು.

ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments