Homeಕರ್ನಾಟಕಡೆಂಘೀ ಹರುಡುವುದಕ್ಕಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿವೆ: ದಿನೇಶ್ ಗುಂಡೂರಾವ್

ಡೆಂಘೀ ಹರುಡುವುದಕ್ಕಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿವೆ: ದಿನೇಶ್ ಗುಂಡೂರಾವ್

ಡೆಂಘೀ ಹರುಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ. ವಿಪಕ್ಷ ನಾಯಕರು ಜನರಲ್ಲಿ ಆತಂಕ ಮೂಡಿಸುವ ಬದಲು ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಆರೋಗ್ಯ ಇಲಾಖೆ ಪ್ರತಿನಿತ್ಯ ಡೆಂಘೀ ನಿಯಂತ್ರಿಸುವತ್ತ ಹೆಚ್ಚಿನ ನಿಗಾ ವಹಿಸುತ್ತಿದೆ. ಡೆಂಘೀ ಇಂದಾಗಿ ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಸ್ಥಿತಿ ಇಲ್ಲ” ಎಂದರು.

“ಯಾವುದೇ ಬೆಡ್ ಅಥಾವಾ ಔಷಧಿಯ ಕೊರತೆಯಿಲ್ಲ.‌ ಡೆಂಘೀ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿ ತಿಳಿಸಿದೆ. ಇನ್ನು ಎರಡು ತಿಂಗಳು ಡೆಂಘೀ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು” ಎಂದು ಹೇಳಿದರು.

“ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಘೀ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.‌ ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒ ಗಳಿಗೆ ಸೂಚಿಸಲಾಗಿದೆ” ಎಂದರು.

“ಔಷಧಿಗಳ ಲಭ್ಯತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಜಾಗೃತರಾಗಿ ಡೆಂಘೀ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ” ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.‌

ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೆ, ಯಾವುದೇ ರೆಸಾರ್ಟ್ ಹೋಗಿರಲಿಲ್ಲ

“ಡೆಂಘೀ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ? ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಘೀ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನ ಗುರುತಿಸಿ ಅಲ್ಲಿಯ ನಿವಾಸಿಗಳನ್ನ ಎಚ್ಚರಿಸಿದ್ದೇವೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments