Homeಕರ್ನಾಟಕಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಅವ್ಯವಹಾರ, ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್‌ ಆಗ್ರಹ

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಅವ್ಯವಹಾರ, ಸರ್ಕಾರ ಮಧ್ಯಪ್ರವೇಶಿಸಲು ಬಿ ಕೆ ಹರಿಪ್ರಸಾದ್‌ ಆಗ್ರಹ

ಉಡುಪಿ ಜಿಲ್ಲೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಭಾರಿ ಅವ್ಯವಹಾರವಾಗಿದ್ದು, ಗ್ರಾಹಕರಿಗೆ ನ್ಯಾಯಕ್ಕಾಗಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಉಡುಪಿ ಮೂಲದ ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಬ್ಯಾಂಕಿನ ಅಮಾಯಕ ಗ್ರಾಹಕರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ಯಾಂಕಿನ ಸುಮಾರು 1,413 ಗ್ರಾಹಕರು ತಲಾ 20 ಸಾವಿರದಂತೆ ಸಾಲ ಪಡೆದಿದ್ದಾರೆ. ಆದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 2 ಲಕ್ಷ ಸಾಲ ಪಡೆದಿರುವುದಾಗಿ ದಾಖಲೆಗಳನ್ನು ಸೃಷ್ಟಿಸಿ ಬರೋಬ್ಬರಿ 20 ಕೋಟಿಗೂ ಹೆಚ್ಚು ಹಣ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬರುತ್ತಿದೆ. ನೂರಾರು ಗ್ರಾಹಕರು ತಾವು ಪಡೆದುಕೊಂಡ ಸಾಲದ ಹಣಕ್ಕಿಂತಲೂ ಹೆಚ್ಚಿನ ಹಣವನ್ನು ಈಗಾಗಲೇ ಪಾವತಿ ಮಾಡಿದ್ದಾರೆ. ಆದರೂ ಬ್ಯಾಂಕಿನ ಸಿಬ್ಬಂದಿಗಳು ದಬ್ಬಾಳಿಕೆ ದೌರ್ಜನ್ಯ ನಡೆಸಿ ಗ್ರಾಹಕರಿಂದ ಮತ್ತಷ್ಟು ಹಣ ಕೀಳುತ್ತಿದ್ದಾರೆಂದು ಗ್ರಾಹಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಡಿಸಿ ಮೋಸ ಮಾಡಿದ್ದಲ್ಲದೆ ಗ್ರಾಹಕರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವುದು ಅಕ್ಷಮ್ಯ ಎಂದಿದ್ದಾರೆ.

ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿವೆ. ಕಳೆದ ವರ್ಷ ಬ್ಯಾಂಕಿನ ಮ್ಯಾನೇಜರ್ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಲವು ಪ್ರಭಾವಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ. ಪ್ರಕರಣವೂ ಗಂಭೀರವಾಗಿದ್ದು ಕೂಡಲೇ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯವದಗಿಸಿಕೊಡಬೇಕಾಗಿದೆ.‌ ಆದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments