Homeಕರ್ನಾಟಕಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಗಡ್ಕರಿಗೆ ಬೊಮ್ಮಾಯಿ ಮನವಿ

ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಲು ಗಡ್ಕರಿಗೆ ಬೊಮ್ಮಾಯಿ ಮನವಿ

ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಬುಧವಾರ ನವ ದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

“ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯನ್ನಾಗಿ ಪರಿವರ್ತಿಸುವುದು, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿರುವುದಾಗಿ ಬೊಮ್ಮಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕರ್ನಾಟಕದ ಮುಖ್ಯಮಂತ್ರಿ ಕೆಲಸ ಮಾಡಿದ್ದು ಅತ್ಯಂತ ಹೆಮ್ಮೆಯ ಸಂಗತಿ. ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ” ಎಂದಿದ್ದಾರೆ.

ಈ ಸಂದರ್ಭದಲ್ಲಿ ಸಂಸದ ಡಾ. ಸುಧಾಕರ್ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments