Homeಕರ್ನಾಟಕಗಡಿ ವಿವಾದ | ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಲಿ: ಆದಿತ್ಯ ಠಾಕ್ರೆ ಹೊಸ ಕ್ಯಾತೆ

ಗಡಿ ವಿವಾದ | ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಲಿ: ಆದಿತ್ಯ ಠಾಕ್ರೆ ಹೊಸ ಕ್ಯಾತೆ

ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್‌ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.‌

ಚಳಿಗಾಲದ ಅಧಿವೇಶನ ಆರಂಭಗೊಳ್ಳುವ ಸಂದರ್ಭದಲ್ಲೇ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಗಡಿ ವಿವಾದವನ್ನು ಕೆದಕಿದ್ದಾರೆ. ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಉದ್ದವ್‌ ಠಾಕ್ರೆ ನೇತೃತ್ವದ ಬಣ ಗಡಿ ವಿಚಾರವನ್ನು ಕೆದಕುವುದು ಹೊಸದೆನಲ್ಲ. ಇಲ್ಲಿಯವರೆಗೆ ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ ಠಾಕ್ರೆ ಈಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments