Homeಕರ್ನಾಟಕಮೈಕ್ರೋ ಫೈನಾನ್ಸ್‌ ಹಾವಳಿಗೆ ಬ್ರೇಕ್‌, ಬಲಿಷ್ಠ ಕಾಯ್ದೆ ಬೇಗನೆ ಜಾರಿ: ಸಿಎಂ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್‌ ಹಾವಳಿಗೆ ಬ್ರೇಕ್‌, ಬಲಿಷ್ಠ ಕಾಯ್ದೆ ಬೇಗನೆ ಜಾರಿ: ಸಿಎಂ ಸಿದ್ದರಾಮಯ್ಯ

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಯಿತು.

ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ. ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ ಎಂದು ಸಿಎಂ ಹೇಳಿದ್ದಾರೆ.

ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ. ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments