Homeಕರ್ನಾಟಕಉಪಚುನಾವಣೆ ಸಮರ | ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ಕಾಂಗ್ರೆಸ್‌ ಗೆಲುವು

ಉಪಚುನಾವಣೆ ಸಮರ | ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿ ಕಾಂಗ್ರೆಸ್‌ ಗೆಲುವು

ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ರಾಜ್ಯದ ಗಮನ ಸೆಳೆದಿದ್ದ ಗೊಂಬೆಗಳ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವಿನ ನಗೆ ಬೀರಿದ್ದಾರೆ. ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಮತ್ತೊಮ್ಮೆ ಆಘಾತವಾಗಿದೆ. ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭೆ ಹಾಗೂ ಈಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋಲು ಮುಂದುವರಿದಿದೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಾವುಟ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಹಳ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿದೆ.

ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿ ಅವರನ್ನು ಮಣಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸಂಡೂರು: ಕಾಂಗ್ರೆಸ್‌ ಗೆಲುವಿನ ನಾಗಾಲೋಟ

ಸಂಡೂರು ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತವಾಗಿ ಘೋಷಣೆಯೊಂದೆ ಬಾಕಿ ಇದೆ.

ಸಂಡೂರು ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಅನ್ನಪೂರ್ಣ ಗೆಲುವಿನ ಮೂಲಕ ಕಾಂಗ್ರೆಸ್‌ ಇಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments