Homeಕರ್ನಾಟಕಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ : ವಿವರಣೆ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ

ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ : ವಿವರಣೆ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ

ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹಲೋತ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ” ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು.

ರಾಜ್ಯಪಾಲರ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್‌ ಖರ್ಗೆ, “ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ” ಎಂದರು.

“ಬಿ ವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ, ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು” ಎಂದು ಹರಿಹಾಯ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments