Homeಕರ್ನಾಟಕಜಾತಿಗಣತಿ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವ ಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹಾಸನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ, ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿದರು.

“ಎಲ್ಲರ ಅಭಿಪ್ರಾಯವನ್ನು ಪಡೆದೇ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ, ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಜಯಪ್ರಕಾಶ ಹೆಗ್ಡೆ ಅವರು ಅಧ್ಯಕ್ಷರಲ್ಲವೇ? ಅವರು ವರದಿಯನ್ನು ಸಲ್ಲಿಸಿದ್ದಾರೆ. ಅದನ್ನು ಸ್ವೀಕರಿಸಿದ್ದೇವೆ. ಅದರಲ್ಲಿ ಏನಿದೆ? ಏನೆಲ್ಲ ವಿಷಯಗಳ ಬಗ್ಗೆ ಚರ್ಚೆ ಆಗಬೇಕು ಎಂಬುದನ್ನು ಸಂಪುಟದಲ್ಲಿ ವಿಸ್ತ್ರತವಾಗಿ ಚರ್ಚೆ ಮಾಡುತ್ತೇವೆ” ಎಂದರು.

ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಿಲ್ಲ

“ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ” ಎಂದು ತಿಳಿಸಿದರು.

ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ

ಪಾಕಿಸ್ತಾನ ಪರ ಘೋಷಣೆ ಪ್ರಕರಣ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬೇಗ ಬಹಿರಂಗಪಡಿಸಬೇಕು ಎಂದು ವಿರೋಧಪಕ್ಷದ ನಾಯಕ ಅಶೋಕ್ ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ವರದಿ ಬಂದ ತಕ್ಷಣ ತಬಹಿರಂಗ ಮಾಡುತ್ತೇವೆ. ಭಾರತದ ಪರವಾಗಿ ಇಲ್ಲದಿರುವವರು ಘೋಷಣೆ ಕೂಗಿದ್ದು ನಿಜವಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ದೇಶಭಕ್ತಿಯನ್ನು ಬಿಜೆಪಿಯವರು ಕಾಂಗ್ರೆಸ್ ಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ” ಎಂದು ತಿರುಗೇಟು ನೀಡಿದರು.

ಜಾತ್ಯಾತೀತ ಜೆಡಿಎಸ್ ಕೋಮುವಾದಿ ಪಕ್ಷದೊಂದಿಗೆ ಮೈತ್ರಿ

ವಿರೋಧಪಕ್ಷದವರು ಅಧಿವೇಶನವನ್ನು ಬಹಿಷ್ಕರಿಸಿ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯವರು ಒಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ , ಮತ್ತೊಬ್ಬರು ಗೈರಾಗಿದ್ದರು. ಇದನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ. ಪಕ್ಷವು ಮಾಡಿಕೊಂಡಿರುವ ಮೈತ್ರಿಯನ್ನು ಶಾಸಕರೇ ಒಪ್ಪಿರುವುದಿಲ್ಲ. ಜೆಡಿಎಸ್ ಅವರು ಜಾತ್ಯಾತೀತರಾಗಿದ್ದು, ಕೋಮುವಾದಿಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದರು” ಎಂದು ತಿಳಿಸಿದರು.

“ಹಾಸನ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 48 ಕೋಟಿ ರೂ. ಕೊಟ್ಟಿಲ್ಲ ಎಂದು ಜೆಡಿಎಸ್ ಟೀಕೆಗೆ ಪ್ರತಿಕ್ರಿಯೆ ನೀಡಿ, ಇದಕ್ಕೆ ಅನುದಾನವನ್ನು ಜೆಡಿಎಸ್ ಅವರಲ್ಲ, ನಮ್ಮ ಸರ್ಕಾರವೇ ನೀಡುತ್ತದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments