Homeಕರ್ನಾಟಕಸಚಿವ ಸಂಪುಟ ಸಭೆ | 7ನೇ ವೇತನ ಆಯೋಗ ಜಾರಿಗೆ ಕಾಲ ಸನ್ನಿಹಿತ, ಕೆಜಿಎಫ್‌ನಲ್ಲಿ ಗಣಿಗೆ...

ಸಚಿವ ಸಂಪುಟ ಸಭೆ | 7ನೇ ವೇತನ ಆಯೋಗ ಜಾರಿಗೆ ಕಾಲ ಸನ್ನಿಹಿತ, ಕೆಜಿಎಫ್‌ನಲ್ಲಿ ಗಣಿಗೆ ಅನುಮತಿ

ವಿಧಾನಸೌಧದಲ್ಲಿ ಗುರುವಾರ (ಜೂ.20) ಸಿಎಂ ಸಿದ್ದರಾಮಯ್ಯ ನೇತೃತ್ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ‌ ಶಿಫಾರಸು ಕುರಿತು ಗಂಭೀರ ಚರ್ಚೆ ನಡೆದಿದೆ.

7ನೇ ವೇತನ ಆಯೋಗದ‌ ಶಿಫಾರಸು ಜಾರಿ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಹಿಸಿ ಸಚಿವ ಸಂಪುಟ ಸಭೆ ನಿರ್ಧಾರ ತೆಗೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ 7ನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಶೇ.25ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ‌ ಸಿಎಂಗೆ ನೀಡಲಾಗಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಏಳನೇ ವೇತನ ಆಯೋಗ ಜಾರಿಯಾದರೆ 13.5 ಲಕ್ಷ ನೌಕರರಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು, ನಿಗಮ-ಮಂಡಳಿ, ಪ್ರಾಧಿಕಾರಿಗಳ 3 ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ 7ನೇ ವೇತನ ಆಯೋಗ ಅನ್ವಯವಾಗಲಿದೆ.

ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಆರಂಭ

ಸಚಿವ ಸಂಪುಟ ಸಭೆಯಲ್ಲಿ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ಸೇರಿದಂತೆ ಒಟ್ಟು 20 ವಿಷಯಗಳ ಮೇಲೆ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳಲಾಗಿದೆ.

ಸಂಪುಟ ಸಭೆ ನಂತರ ಕಾನೂನು ಸಚಿವ ಹೆಚ್ ಕೆ ಪಾಟೀಲ್‌ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ವಾಣಿಜ್ಯ ಕೈಗಾರಿಕೆ ಇಲಾಖೆ ಗೆ ಸಂಬಂಧಿಸಿದಂತೆ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ನಿಷ್ಕ್ರಿಯವಾಗಿದ್ದ 1304 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರಿಸಲು ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಹಮತಿಸಿದೆ. ಗಣಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ” ಎಂದರು.

“ವಿಶ್ವವಿದ್ಯಾಲಯಗಳ ಅಭಿವೃದ್ದಿಗೆ 297.77 ಕೋಟಿ ರೂ. ಬಿಡುಗಡೆಗೆ ಕ್ಯಾಬಿನೆಟ್ ಅನುಮೋದಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ ಮಾಡಲಾಗಿದ್ದು, 29.15 ಕೋಟಿ ರೂ. ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಉಚಿತ ನೀರಿನ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ” ಎಂದು ವಿವರಿಸಿದರು.

“ಕೋಟಿ ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಉಚಿತ ನೀರಿನ ಸೌಲಭ್ಯ, ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ ನೀಡಲಾಗಿದೆ” ಎಂದರು.

“ಟೇನಿಂಗ್ ಡಂಪ್ಸ್ ಬಳಸಿ ಗಣಿ ಚಟುವಟಿಕೆ ಮುಂದುವರಿಸಲು ಅವಕಾಶ ನೀಡಲಾಗಿದ್ದು, 2230 ಎಕರೆ ಭೂಮಿ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ನೀಡಬೇಕು. 75.24 ಕೋಟಿ ರೂ. ಸರ್ಕಾರಕ್ಕೆ ಪಾವತಿ ಮಾಡುವುದು ಬಾಕಿ ಇದೆ. ಅದನ್ನೂ ಭರಿಸುವಂತೆ ಭಾರತ್ ಮೈನಿಂಗ್ಸ್​​ಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

“ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬೆಳಗಾವಿ ಬಳಿಯಲ್ಲಿ ಬಡಾವಣೆ ನಿರ್ಮಾಣಕ್ಕೆ 137 ಕೋಟಿ ರೂ. ಅಂದಾಜು ವೆಚ್ಚಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ” ಎಂದು ಎಚ್‌ ಕೆ ಪಾಟೀಲ್‌ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments