Homeಕರ್ನಾಟಕಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ

ಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ.

ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಹೆಚ್‌ ಕೆ ಪಾಟೀಲ್‌, “ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದರು.

ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೇ ಸೆಂಟ್ರಲ್ ಇಆರ್.ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments