Homeಕರ್ನಾಟಕಸಚಿವ ಸಂಪುಟ ಸಭೆ | ಒಳಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು

ಸಚಿವ ಸಂಪುಟ ಸಭೆ | ಒಳಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು

ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಇರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3) ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಎಡಗೈ ಸಮುದಾಯದ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುವ ಭರವಸೆಯನ್ನು ಕಾಂಗ್ರೆಸ್‌ ನೀಡಿತ್ತು.

ಸಭೆಯ ಬಳಿಕ ಡಾ. ಎಚ್ ಸಿ ಮಹದೇವಪ್ಪ ಮಾತನಾಡಿ, “ಸುಮಾರು ಎರಡು ದಶಕಗಳಿಂದ ದಲಿತರ ಒಳಪಂಗಡಗಳು ಒಳ‌ಮೀಸಲಾತಿಗೆ ಬೇಡಿಕೆ ಇಟ್ಟಿದ್ದವು. ಚಿತ್ರದುರ್ಗದಲ್ಲಿ ಎಸ್ ಟಿ ಎಸ್ ಸಿ ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತೇವೆ ಎಂದಿದ್ದೆವು. ಆದರೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಿ ಸದಾಶಿವ ಆಯೋಗದ ವರದಿ ಅಪ್ರಸ್ತುತ ಎಂದು ಶಿಫಾರಸು ಮಾಡಿತ್ತು.101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳ‌ಮೀಸಲಾತಿ ಕೊಡಲು ಸಾಧ್ಯ ಇಲ್ಲ. ಈ ನಿಟ್ಟಿನಲ್ಲಿ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಣೆ ಮಾಡುವಂತೆ ಲಿಂಗಾಯತ ಮಠಾಧೀಶರು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಬೇಡಿಕೆಗೆ ಈಗ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿ ಘೋಷಿಸಿದೆ.

ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡುವಂತೆ ತರಳಬಾಳು ಜಗದ್ಗುರುಗಳು, ಮಾದರ ಚೆನ್ನಯ್ಯ ಸ್ವಾಮೀಜಿ, ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ್ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು. ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ವೀರಭದ್ರ ಶಿವಾ ಕಡಕಂಚಿ, ಜ್ಞಾನಪ್ರಕಾಶ ಸ್ವಾಮೀಜಿ, ಹುಲಸೂರ ಶ್ರೀಗಳು, ಅಕ್ಕ ಅನ್ನಪೂರ್ಣ ತಾಯಿ, ಮೇಹಕರ ಶ್ರೀಗಳು, ಭಾತಂಬ್ರಾ ಶ್ರೀಗಳು, ಡಾ.ಸಿದ್ದರಾಮ ಬೆಲ್ದಾಳ ಶರಣರು, ಡಾ.ಗಂಗಾಂಬಿಕೆ ಅಕ್ಕ, ಭಂತೆ ವರಜ್ಯೋತಿ, ಭಂತೆ ನಾಗರತ್ನ ಸೇರಿದಂತೆ ವಿವಿಧ ಮಠಗಳ ಸುಮಾರು 48 ಶ್ರೀಗಳು ಮನವಿ ಪತ್ರಕ್ಕೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments