Homeಕರ್ನಾಟಕಪ್ರಜಾಪ್ರಭುತ್ವ ಚಳವಳಿಗೆ ಕರೆ ಕೊಟ್ಟ ಸಿಎಂ, ಮಾನವ ಸರಪಳಿಗೆ ಕೈ ಜೋಡಿಸಲು ಮನವಿ

ಪ್ರಜಾಪ್ರಭುತ್ವ ಚಳವಳಿಗೆ ಕರೆ ಕೊಟ್ಟ ಸಿಎಂ, ಮಾನವ ಸರಪಳಿಗೆ ಕೈ ಜೋಡಿಸಲು ಮನವಿ

ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೂ 2,500 ಕಿ.ಮೀ. ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

“ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ” ಎಂದು ಸಿಎಂ ಅಭಿಪ್ರಾಯಪಟ್ಟರು.

“ಬೀದರ್‌ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ , ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ” ಎಂದು ಕರೆ ನೀಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಕ್ಫ್ ಸಚಿವ ರಹಮಾನ್ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ 200 ಕ್ಕೂ ಹೆಚ್ಚು ಸ್ವಯಂ ಸೇವಾ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಮುಖಂಡರು ಸಭೆಯಲ್ಲಿ ತೊಡಗಿಸಿಕೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments