Homeಕರ್ನಾಟಕಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಲು ಆಗ್ರಹಿಸಿ ಕರವೇಯಿಂದ 'ಎಕ್ಸ್' ಅಭಿಯಾನ

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಲು ಆಗ್ರಹಿಸಿ ಕರವೇಯಿಂದ ‘ಎಕ್ಸ್’ ಅಭಿಯಾನ

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಶನಿವಾರ (ನ.11) ಸಂಜೆ 5 ಗಂಟೆಯಿಂದ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅಭಿಯಾನ ಹಮ್ಮಿಕೊಂಡಿದೆ.

ಕನ್ನಡಬಾವುಟ_ನಮ್ಮಗುರುತು #KannadaFlag_MyPride ಎಂಬ ಹ್ಯಾಶ್ ಟ್ಯಾಗ್‌ಗಳ ಅಡಿಯಲ್ಲಿ ಈ ಅಭಿಯಾನ ನಡೆಯುತ್ತಿದೆ.

“ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಕರ್ನಾಟಕ ಸರ್ಕಾರ ಈಗಾಗಲೇ ಭಾರತ ಒಕ್ಕೂಟ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದನ್ನು ಅಂಗೀಕರಿಸಬೇಕೆಂದು ನಾವು ಈ ಮೂಲಕ ಒತ್ತಾಯಿಸಲಿದ್ದೇವೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕನ್ನಡಿಗರಿಗೆ ಕನ್ನಡ ಬಾವುಟ ಮೊದಲ ಗುರುತು. ಭಾರತ ಒಕ್ಕೂಟದ ಭಾಗವಾಗಿ ನಮ್ಮದೇ ಆದ ಬಾವುಟವೊಂದನ್ನು ಹೊಂದುವುದಕ್ಕೆ ಅವಕಾಶ ಇರಬೇಕು‌. ಈಗಾಗಲೇ ಕೋಟ್ಯಂತರ ಕನ್ನಡಿಗರು ಕನ್ನಡ ಬಾವುಟವನ್ನು ಆರಾಧಿಸುತ್ತಾರೆ. ಹೀಗಾಗಿ ಒಕ್ಕೂಟ ಸರ್ಕಾರ ಕೂಡಲೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಶನಿವಾರ ಸಂಜೆ ಸಾವಿರಾರು ಕರವೇ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡಿಸುವ ಈ ಹೋರಾಟಕ್ಕೆ ಎಲ್ಲ ಕನ್ನಡಿಗರೂ ಬೆಂಬಲ ನೀಡಬೇಕು” ಎಂದು ಟಿ ಎ ನಾರಾಯಣಗೌಡ ಮನವಿ ಮಾಡಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments