Homeಕರ್ನಾಟಕಚುನಾವಣಾ ಬಾಂಡ್ ರದ್ದು | ಸುಪ್ರೀಂ ಕೋರ್ಟ್‌ ಧೈರ್ಯಕ್ಕೆ ಅಭಿನಂದನೆ: ಡಿ ಕೆ ಶಿವಕುಮಾರ್‌

ಚುನಾವಣಾ ಬಾಂಡ್ ರದ್ದು | ಸುಪ್ರೀಂ ಕೋರ್ಟ್‌ ಧೈರ್ಯಕ್ಕೆ ಅಭಿನಂದನೆ: ಡಿ ಕೆ ಶಿವಕುಮಾರ್‌

ದೇಶದ ಇತಿಹಾಸದಲ್ಲೇ ಚುನಾವಣಾ ಬಾಂಡ್ ವಿಚಾರವಾಗಿ ಸುಪ್ರೀಂ ಕೋರ್ಟ್‌ ಮಹತ್ವದ ನಿರ್ಧಾರ ಕೈಗೊಂಡಿದೆ. ಅವರ ಈ ಧೈರ್ಯವಾದ ನಿರ್ಧಾರಕ್ಕೆ ನಾನು ಅಭಿನಂದಿಸುತ್ತೇನೆ. ದೇಶದ ಪ್ರಜಾಪ್ರಭುತ್ವ ಉಳಿಸಲು ಇಂತಹ ಮಹತ್ವದ ನಿರ್ಧಾರಗಳು ಬೇಕು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಚುನಾವಣಾ ಬಾಂಡ್ ಗಳನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿರುವ ವಿಚಾರವಾಗಿ ವಿಧಾಮಸೌಧ ಆವರಣದಲ್ಲಿ ಗುರುವಾರ ಪ್ರತಿಕ್ರಿಯಿಸಿದರು.

“ನಮಗೂ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ” ಎಂದು ಶಿವಕುಮಾರ್ ತಿರುಗೇಟು ನೀಡಿದರು.

“ನಮಗೂ ಎಲ್ಲಾ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ. ಜೆಡಿಎಸ್ ವಿಫಲವಾಗಿರುವ ಕಾರಣದಿಂದ ಅವರು ಬಿಜೆಪಿ ಜತೆ ನೆಂಟಸ್ಥನ ಮಾಡುತ್ತಿದ್ದಾರೆ. ಆ ಪಕ್ಷಗಳಿಂದ ನಮಗೂ ಆತ್ಮಸಾಕ್ಷಿಯ ಮತಗಳು ಬರುವ ವಿಶ್ವಾಸವಿದೆ. ಬಿಜೆಪಿ ಮತ್ತು ಜೆಡಿಎಸ್ ನವರು ಸದಾ ಕುದುರೆ ವ್ಯಾಪಾರ ಮಾಡುತ್ತಾರೆ. ಅವರು ಅದಕ್ಕೆ ಹೆಸರುವಾಸಿ. ಫೆ. 27 ರಂದು ಎಲ್ಲವೂ ತಿಳಿಯಲಿದೆ. ಅವರು ಬಿಜೆಪಿಗೆ ಬಹಳ ಹತ್ತಿರವಾಗಿರುವಂತೆ ಬಿಂಬಿಸುತ್ತಿದ್ದಾರೆ. ಬಿಜೆಪಿಯ ಎಷ್ಟು ಮತಗಳು ಅವರಿಗೆ ಸಿಗಲಿದೆ ಎಂಬುದನ್ನು ಕಾದುನೋಡಿ” ಎಂದು ಹೇಳಿದರು.

ಮೈತ್ರಿಯಿಂದ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಿರುವ ಬಗ್ಗೆ ಕೇಳಿದಾಗ, “ಅವರು ಅವರ ಪ್ರಯತ್ನ ಮಾಡಲಿ. ನಾವು ನಮ್ಮ ಒಗ್ಗಟ್ಟಿನ ರಾಜಕಾರಣ ಮಾಡುತ್ತೇವೆ” ಎಂದು ತಿಳಿಸಿದರು.

ರಾಜ್ಯಸಭೆ ಅಭ್ಯರ್ಥಿಗಳ ವಿಚಾರವಾಗಿ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ಬೆಂಬಲ ನೀಡಿದ್ದಾರೆ. ರಾಜ್ಯಸಭೆಗೆ ನಮ್ಮ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಇವರು ಆಯ್ಕೆಯಾಗಿ ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲಿದ್ದಾರೆ ಎಂಬ ವಿಶ್ವಾಸವಿದೆ” ಎಂದರು.

ಅಜಯ್ ಮಾಕೇನ್ ಅವರ ಆಯ್ಕೆ ವಿಚಾರವಾಗಿ ಕೇಳಿದಾಗ, “ಈ ಹಿಂದೆ ಬಿಜೆಪಿ, ಜೆಡಿಎಸ್ ನವರು ಕರೆದುಕೊಂಡು ಬಂದು ನಿಲ್ಲಿಸಿದ್ದರಲ್ಲ, ಅವರನ್ನು ಕೇಳಿ. ಅಜಯ್ ಮಾಕೇನ್ ಅವರ ಕುಟುಂಬ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಅನೇಕ ತ್ಯಾಗ ಮಾಡಿದೆ. ವಿದ್ಯಾರ್ಥಿ ನಾಯಕನಿಂದ ದೆಹಲಿವರೆಗೂ ಪಕ್ಷದ ಸಂಘಟನೆ ಮಾಡಿರುವ ಪಕ್ಷದ ಆಧಾರಸ್ತಂಭ ಇವರು. ಹೀಗಾಗಿ ಅವರನ್ನು ನಾವು ಬಹಳ ಸಂತೋಷದಿಂದ ಆಯ್ಕೆ ಮಾಡಿದ್ದೇವೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments