Homeಕರ್ನಾಟಕಜಾತಿ ಗಣತಿ | ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ನಿರ್ಧಾರ: ಕುಮಾರಸ್ವಾಮಿ

ಜಾತಿ ಗಣತಿ | ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ನಿರ್ಧಾರ: ಕುಮಾರಸ್ವಾಮಿ

ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರದ ಜಾತಿ ಗಣತಿ ಘೋಷನೆಯನ್ನು ಸ್ವಾಗಿತಿಸಿ ಟ್ವೀಟ್‌ ಮಾಡಿರುವ ಅವರು, “ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ” ಎಂದಿದ್ದಾರೆ.

“ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ” ಎಂದು ತಿಳಿಸಿದ್ದಾರೆ.

“ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ. ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments