Homeಕರ್ನಾಟಕಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ: ಸಿಎಂ ಸಿದ್ದರಾಮಯ್ಯ

ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ” ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿಯದೇ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ” ಎಂದು ತಿಳಿಸಿದ್ದಾರೆ.

“ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ” ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments