Homeದೇಶಜಮ್ಮು-ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ

ಜಮ್ಮು-ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ದೆಹಲಿ ನಿವಾಸ ಮತ್ತು ಕಚೇರಿಗಳ ಮೇಲೆ ಗುರುವಾರ ಸಿಬಿಐ ದಾಳಿ ನಡೆಸಿದೆ.

ಜಮ್ಮು–ಕಾಶ್ಮೀರ ಪ್ರದೇಶದಲ್ಲಿ ಹೈಡಲ್ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ದಾಳಿ ನಡೆಸಿದೆ. ದೆಹಲಿಯ 30 ಕಡೆ ಈ ನಡೆದಿದೆ.

ಈ ಹಿಂದೆ ವಿಮಾ ಹಗರಣದಲ್ಲಿ ಸತ್ಯಪಾಲ್‌ ಮಲಿಕ್ ವಿರುದ್ಧ ಸಿಬಿಐ ಕ್ರಮ ಕೈಗೊಂಡಿತ್ತು. ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಸತ್ಯಪಾಲ್ ಮಲಿಕ್ ಮತ್ತು ಆತನ ಆಪ್ತರೊಂದಿಗೆ ಸಿಬಿಐ ದಾಳಿ ನಡೆಸಿತ್ತು.

ಸದ್ಯದ ಮಾಹಿತಿ ಪ್ರಕಾರ, 2019 ರಲ್ಲಿ ಕಿಶ್ತ್ವಾರ್‌ನಲ್ಲಿ ಕಿರು ಜಲವಿದ್ಯುತ್ ಯೋಜನೆಗೆ 2,200 ಕೋಟಿ ರೂಪಾಯಿ ಮೌಲ್ಯದ ಸಿವಿಲ್ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

300 ಕೋಟಿ ರೂ.ಲಂಚದ ಆಫರ್ ಮಾಡಿದ್ದ ಮಾಲಿಕ್!

ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ಇವರ ಮೇಲಿದೆ.

‌ಯೋಜನೆಗೆ ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ತನಿಖಾ ದಳ ರಾಜಸ್ಥಾನ ಮತ್ತು ದೆಹಲಿಯ 12 ಸ್ಥಳಗಳಲ್ಲಿ ಆರು ಜನರ ಮೇಲೆ ದಾಳಿ ನಡೆಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಗವರ್ನರ್ ಮಲಿಕ್ ಅವರ ಮಾಜಿ ಪತ್ರಿಕಾ ಕಾರ್ಯದರ್ಶಿ ಸುನಕ್ ಬಾಲಿ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments