Homeಕರ್ನಾಟಕನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಅಗತ್ಯ: ಎನ್. ಚಲುವರಾಯಸ್ವಾಮಿ

ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಅಗತ್ಯ: ಎನ್. ಚಲುವರಾಯಸ್ವಾಮಿ

ನೀರಾವರಿ ಇಲಾಖೆಗೆ ರಾಜ್ಯ ಸರ್ಕಾರ ಸಾಕಷ್ಟು ಹಣ ಒದಗಿಸಿದೆ. ಆದರೆ, ಇದನ್ನು ಇನ್ನಷ್ಟು ಹೆಚ್ಚಿಸಬೇಕು. ಇಲ್ಲದಿದ್ದರೆ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಕಷ್ಟವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

​ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಪ್ರತಿ ವರ್ಷವೂ ಯೋಜನೆಗಳ ಬಜೆಟ್ ಗಾತ್ರ ಏರಿಕೆಯಾಗುತ್ತಲೇ ಇರುತ್ತದೆ. ಯೋಜನೆಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳದಿದ್ದರೆ ಜನರಿಗೆ ನೀರು ಒದಗಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಚರ್ಚೆ ನಡೆಸಿ, ಯೋಜನೆಗಳ ಅನುದಾನದಲ್ಲಿ ಪಾಲುದಾರಿಕೆ ನೀಡಬೇಕು” ಎಂದು ಮನವಿ ಮಾಡಿದರು.

​”2005ರಲ್ಲಿ ಪ್ರಾರಂಭಗೊಂಡ ಬಳ್ಳಾರಿ ನಾಲೆ ಯೋಜನೆಗೆ 130 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ನಿಗದಿಪಡಿಸಲಾಗಿತ್ತು. ಆದರೆ ಈಗ ಯೋಜನೆಯ ವೆಚ್ಚ 2 ಸಾವಿರ ಕೋಟಿ ರೂಪಾಯಿ ದಾಟಿದೆ. ಹೀಗಾಗಿ ವೆಚ್ಚ ಸರಿದೂಗಿಸಲು ಕಾಲಮಿತಿಯೊಳಗೆ ಕಾರ್ಯಯೋಜನೆ ರೂಪಿಸಬೇಕು. ರಾಜ್ಯದಲ್ಲಿ ನೀರಾವರಿ ಯೋಜನೆಗಳಲ್ಲಿ ಸಾವಿರಾರು ಕೆಲಸಗಳಿವೆ. ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರವೂ ಪಾಲುದಾರಿಕೆಯಲ್ಲಿ ಹಣ ನೀಡಿದರೆ, ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸುವುದು ನನ್ನ ಜವಾಬ್ದಾರಿ” ಎಂದರು.

​ಮಹದಾಯಿ ಯೋಜನೆ ಬಗ್ಗೆ ಮಾತನಾಡಿದ ಅವರು, “ಈ ಯೋಜನೆ ಸಂಪೂರ್ಣವಾಗಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರ ಕೈಯಲ್ಲಿದೆ. ಕುಡಿಯುವ ನೀರಿಗೆ ನ್ಯಾಯಾಲಯದಲ್ಲಿ ಮೊದಲ ಆದ್ಯತೆ ಇದೆ. ಈ ಕುರಿತು ಚಳಿಗಾಲದ ಅಧಿವೇಶನಕ್ಕೂ ಮುನ್ನ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ” ಎಂದರು.

​ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಬಗೆಗಿನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ಇಲಾಖೆಯಲ್ಲಿ ಶೇ. 60ರಷ್ಟು ಹುದ್ದೆಗಳ ಕೊರತೆಯಿದೆ. 300 ಮಂದಿಗೆ ನೇಮಕಾತಿ ಆದೇಶ (Order Copy) ನೀಡುವ ವೇಳೆ ಮೀಸಲಾತಿ ಸಮಸ್ಯೆಯಾಗಿ ನ್ಯಾಯಾಲಯದ ಅಂಗಳ ತಲುಪಿದೆ. ಯಾವುದೇ ಇಲಾಖೆಯಲ್ಲಿ ಶೇ. 50ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿಯಿದ್ದರೆ ಗುಣಮಟ್ಟದ ಕೆಲಸ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು” ಎಂದು ತಿಳಿಸಿದರು.

​”ಹಳೆ ಮೈಸೂರು ಹಾಗೂ ಮಧ್ಯ ಕರ್ನಾಟಕದಲ್ಲಿ ಕುಡಿಯುವ ನೀರಿಗಾಗಿ ಭದ್ರಾ ಮೇಲ್ದಂಡೆ ನೀರನ್ನು ಚಿತ್ರದುರ್ಗಕ್ಕೆ ಹರಿಸಲಾಗಿದೆ. ಕೋಲಾರಕ್ಕೆ ಎತ್ತಿನಹೊಳೆ ನೀರನ್ನು ಹರಿಸುವ ಸಂಕಲ್ಪ ಹೊಂದಿದ್ದೇವೆ. ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ವರ್ಷದೊಳಗೆ ನೀರು ಹರಿಸಲಾಗುವುದು. ಮೇಕೆದಾಟು ಯೋಜನೆ ಪ್ರಾರಂಭಿಸಲು ಸರ್ಕಾರ ಉತ್ಸುಕವಾಗಿದ್ದು, ಯೋಜನೆಗೆ ಮುಳುಗಡೆಯಾಗಲಿರುವ ಪ್ರದೇಶಕ್ಕೆ ಪರ್ಯಾಯವಾಗಿ ಐದು ಸಾವಿರ ಹೆಕ್ಟೇರ್ ಅರಣ್ಯ ಭೂಮಿ ನೀಡಲು ಸ್ಥಳವನ್ನು ಅಂತಿಮಗೊಳಿಸಲಾಗಿದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments