Homeಕರ್ನಾಟಕಕೇಂದ್ರ ಬಜೆಟ್‌ | ದೇಶದ ಆರ್ಥಿಕ ಪರಿಸ್ಥಿತಿ ಮುಚ್ಚಿಟ್ಟ, ವಿನಾಶಕಾರಿ ಬಜೆಟ್: ಸಿಎಂ ಸಿದ್ದರಾಮಯ್ಯ ಟೀಕೆ

ಕೇಂದ್ರ ಬಜೆಟ್‌ | ದೇಶದ ಆರ್ಥಿಕ ಪರಿಸ್ಥಿತಿ ಮುಚ್ಚಿಟ್ಟ, ವಿನಾಶಕಾರಿ ಬಜೆಟ್: ಸಿಎಂ ಸಿದ್ದರಾಮಯ್ಯ ಟೀಕೆ

ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್. ಸಾಲಕ್ಕಾಗಿ ಬಡ್ಡಿ ಪಾವತಿಸುವುದು 1. 91 ಕೋಟಿ ರೂ.ಗಳು. ಇದು ವಿಕಸಿತ ಅಲ್ಲ, ಭಾರತದ ವಿನಾಶಕಾರಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಕೇಂದ್ರ ಬಜೆಟ್ ಅನ್ನು ವಿಶ್ಲೇಷಿಸಿ ಮಾತನಾಡಿದ ಅವರು, “ಕಳೆದ ವರ್ಷಕ್ಕಿಂತ 5.8% ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ನಿರಾಶಾದಾಯಕ ಬಜೆಟ್ ಎನ್ನಬಹುದು” ಎಂದರು.

“ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಆಡಿಲ್ಲ. ಸಾಲ ಹೆಚ್ಚಾಗಿರುವುದು, ಒಟ್ಟು ಸಾಲದ ಪ್ರಮಾಣ ವಿಪರೀತ ಏರಿಕೆ ಆಗಿರುವುದನ್ನು ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರು 2024- 25 ನೇ ವರ್ಷಕ್ಕೆ ಮಧ್ಯಂತರ ಆಯವ್ಯಯ ಮಂಡಿಸಿದ್ದಾರೆ. 47,65758 ಕೋಟಿ ರೂ.ಗಾತ್ರದ ಬಜೆಟ್. ಕಳೆದ ವರ್ಷದ ಬಜೆಟ್ ಗಾತ್ರ 45 3097 ಕೋಟಿ ಆಗಿತ್ತು. 2,62671 ಕೋಟಿ ಹೆಚ್ಚುವರಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಈ ವರ್ಷ 5.8% ಹೆಚ್ಚಾಗಿದೆ” ಎಂದು ಹೇಳಿದರು.

“ಬಜೆಟ್‌ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ ಸಾಲ ಮಾಡಿದ್ದಾರೆ. ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ , ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ವಿಕಸಿತ ಭಾರತ ಎಂದು ನರೇಂದ್ರಮೋದಿ ಪ್ರಚಾರದಲ್ಲಿ ಹೇಳುತ್ತಾರೆ. ಈ ಬಜೆಟ್ ವಿಕಸಿತ ಬಜೆಟ್ ಎನ್ನುತ್ತಾರೆ. ಇದು ನಿಜವಾದ ಅರ್ಥದಲ್ಲಿ ವಿನಾಶಕಾರಿ” ಎಂದು ವಿಶ್ಲೇಷಿಸಿದರು.

“ಬಡವರು, ಯುವಕರು, ರೈತರು, ಮಹಿಳೆಯರಿಗಾಗಿ ವಿಕಸಿತ ಭಾರತ ಎನ್ನುತ್ತಾರೆ. ಆದರೆ ಈ ಸಮುದಾಯಗಳ ಪ್ರಗತಿಗೆ ಕಾರ್ಯಕ್ರಮಗಳೇ ಇಲ್ಲ. ನಾವು ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಅನ್ನಭಾಗ್ಯ, ಕೃಷಿಭಾಗ್ಯ ಕಾರ್ಯಕ್ರಮ ಈ ವರ್ಗದ ಜನರಿಗೆ ಕೊಟ್ಟೆವು. ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ” ಎಂದರು.

“ನಿರ್ಮಲಾ ಸೀತಾರಾಮನ್ ಅವರ 6 ನೇ ಬಜೆಟ್ ಇದು. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ 30 ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ. ಬಡವರ, ಮಹಿಳೆಯರ, ಅಲ್ಪಸಂಖ್ಯಾತರ, ದಲಿತರ ವಿರೋಧಿ ಬಜೆಟ್ ಆಗಿದ್ದು, ಕೇಂದ್ರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ” ಎಂದು ಹೇಳಿದರು.

“2004 -14 ರವರೆಗೆ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79 % ಇತ್ತು. ಈಗ ಬಜೆಟ್ ಬೆಳವಣಿಗೆ 9.6 % ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು 9.6% ಗೆ ತಂದಿದ್ದಾರೆ. 4.19 % ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ ಶೇ 11.14 % ಇತ್ತು ಎನ್.ಡಿ.ಎ ಕಾಲದಲ್ಲಿ 6.4% ಕ್ಕೆ ಕುಸಿತವಾಗಿದೆ. ಆದ್ದರಿಂದ ಇದು ವಿಕಸಿತವಲ್ಲ” ಎಂದು ವ್ಯಾಖ್ಯಾನಿಸಿದರು.

“ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಅನುದಾನ ಬಂದಿಲ್ಲ. 15 ನೇ ಹಣಕಾಸು, ಫೆರಿಫೆರಲ್ ರಿಂಗ್ ರೋಡಿಗೆ ಹಣ ಬಂದಿಲ್ಲ. 5300 ಕೋಟಿ, ಭದ್ರ ಮೇಲ್ದಂಡೆ ಯೋಜನೆಗೆ ಬಂದಿಲ್ಲ. ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ” ಎಂದರು.

“ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಪ್ರಯೋಜನ ಆಗಿಲ್ಲ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು‌. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು” ಎಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments