Homeಕರ್ನಾಟಕನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

ನೂತನವಾಗಿ ನೇಮಕಗೊಂಡ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಹೈಕಮಾಂಡ್‌ ನಾಯಕ ರಣದೀಪ್ ಸುರ್ಜೇವಾಲ್‌ ಅವರು ಆಗಮಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಮೇಲಿನಂತೆ ಹೇಳಿದರು.

ಇದೇ ವೇಳೆ, ನಾಳೆಯಿಂದ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, ‘‘ಇಂದಿನಿಂದಲೇ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದೇನೆ. ವಿಧಾನಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತು ಚರ್ಚೆ ನಡೆಯಲಿದೆ’’ ಎಂದು ಸಿಎಂ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments