Homeಕರ್ನಾಟಕಡಿ ಕೆ ಶಿವಕುಮಾರ್‌ ಮತ್ತು ರಹೀಮ್ ಖಾನ್ ಖಾತೆಗಳಲ್ಲಿ ಮಾರ್ಪಾಡು

ಡಿ ಕೆ ಶಿವಕುಮಾರ್‌ ಮತ್ತು ರಹೀಮ್ ಖಾನ್ ಖಾತೆಗಳಲ್ಲಿ ಮಾರ್ಪಾಡು

ಉಪಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್‌ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಗಳನ್ನು ಮಾರ್ಪಡಿಸಲಾಗಿದೆ.

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರ ಅಭಿವೃದ್ಧಿ ಇಲಾಖೆಗಳನ್ನು ಮೊದಲಿಗೆ ನೀಡಲಾಗಿತ್ತು. ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸೇರಿದಂತೆ ಪ್ರಮುಖ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರ ಅಭಿವೃದ್ಧಿಯನ್ನು ವಹಿಸಲಾಗಿತ್ತು.

ಈಗ ಹಳೆಯ ಖಾತೆಯಾದ ಜಲಸಂಪನ್ಮೂಲ ಇಲಾಖೆ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ಪಟ್ಟಣ ಯೋಜನೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ನಿಗಮಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ ನೀಡಲಾಗಿದೆ.

ಹಾಗೆಯೇ ರಹೀಮ್ ಖಾನ್ ಅವರಿಗೆ ಪೌರಾಡಳಿತ ಹಾಗೂ ಹಜ್ ಖಾತೆ ಉಳಿದಿದ್ದರೂ ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಜವಾಬ್ದಾರಿ ಡಿ ಕೆ ಶಿವಕುಮಾರ್‌ ಅವರ ಪಾಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments