Homeದೇಶಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಇಂದು (ನ.11) ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ಹೆಗ್ಗಳಿಕೆ ಇವರಿಗಿದೆ.

ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, 2025ರ ಮೇ 13ರವರೆಗೆ ಅವರು ಸಿಜೆಐ ಆಗಿ ಅಧಿಕಾರದಲ್ಲಿ ಇರಲಿದ್ದಾರೆ.

1960ರ ಮೇ 14ರಂದು ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್ ಖನ್ನಾ ದೆಹಲಿಯ ಪ್ರತಿಷ್ಠಿತ ಮಾಡರ್ನ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. 1980ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನಂತರ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದಿದ್ದಾರೆ.

2004ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡಿದ್ದ ಅವರು, ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿ ಆಗಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಿ, ವಾದಿಸಿದ್ದಾರೆ. ಅವರ ಚಿಕ್ಕಪ್ಪ ಎಚ್.ಆರ್.ಖನ್ನಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments