Homeಕರ್ನಾಟಕಕಾವೇರಿ ಆರತಿಗೆ ಮುಖ್ಯಮಂತ್ರಿಗಳಿಗೆ ಆಹ್ವಾನ : ಸಚಿವ ಎನ್.ಚಲುವರಾಯಸ್ವಾಮಿ

ಕಾವೇರಿ ಆರತಿಗೆ ಮುಖ್ಯಮಂತ್ರಿಗಳಿಗೆ ಆಹ್ವಾನ : ಸಚಿವ ಎನ್.ಚಲುವರಾಯಸ್ವಾಮಿ

ನಾಡ ಹಬ್ಬ ಮೈಸೂರು ದಸರಾ ಅಂಗವಾಗಿ ಕೃಷ್ಣರಾಜಸಾಗರದ ಬೃಂದಾವನ ಉದ್ಯಾನವನದಲ್ಲಿ (ಕೆಆರ್ ಎಸ್) ಅ.16 ರಿಂದ ನಡೆಯಲಿರುವ “ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”ಗಳ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾಡಳಿತದೊಂದಿಗೆ ಇಂದು ಆಹ್ವಾನಿಸಿದರು.

ಈ ವೇಳೆ ಶ್ರೀ ರಂಗಪಟ್ಟಣದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಇದ್ದರು.

ಜಲಸಂಪನ್ಮೂಲ ಇಲಾಖೆಯ ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅ. 16 ರಿಂದ 21 ರವರೆಗೆ ನಡೆಯಲಿದೆ.

ಅ.16 ರ ಸಂಜೆ 6.00 ಗಂಟೆಗೆ ನಡೆಯಲಿರುವ “ಕಾವೇರಿ ಆರತಿ”ಗೆ ಮುಖ್ಯಮಂತ್ರಿಗಳೊಂದಿಗೆ ಸಚಿವರು ಚಾಲನೆ ನೀಡಲಿದ್ದಾರೆ.
ಅ.21 ರ ವರೆಗೆ ಪ್ರತಿ ದಿನ ಸಂಜೆ 6 ಗಂಟೆಗೆ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments