ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಉಸ್ತುವಾರಿ ಆಗಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸುಧಾಕರ್, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಜಿಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತಾಲೂಕು, ಜಿಲ್ಲಾ, ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರು ಪಾಲ್ಗೊಂಡಿದ್ದರು.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಮೀರ್ ಅಹಮದ್ ಖಾನ್ ಅವರು, “ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲಾಗಿದ್ದು ಹೈಕಮಾಂಡ್‌ಗೆ ವಾಸ್ತವದ ವರದಿ ನೀಡಲಾಗುವುದು” ಎಂದು ತಿಳಿಸಿದರು.
“ವೀರಪ್ಪ ಮೊಯ್ಲಿ, ಶಿವಶಂಕರ ರೆಡ್ಡಿ, ರಕ್ಷಾ ರಾಮಯ್ಯ, ವೆಂಕಟ ರಮಣಯ್ಯ, ಕೆಂಚೆಗೌಡ ಅವರ ಹೆಸರು ಸಭೆಯಲ್ಲಿ ಪ್ರಸ್ತಾಪ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದೂ ಹೇಳಿದ್ದಾರೆ. ಹೀಗಾಗಿ, ನಾವು ತಕ್ಷಣ ಹೈಮಾಂಡ್‌ಗೆ ವರದಿ ನೀಡಲಿದ್ದೇವೆ” ಎಂದು ಹೇಳಿದರು.