ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಸೇರಿ ಹಲವರ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಐದು, ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಕೇಸ್ ದಾಖಲಾಗಿವೆ.
ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.