Homeಕರ್ನಾಟಕಸಿನೆಮಾ ದರ | ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸಿನೆಮಾ ದರ | ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಕರ್ನಾಟಕದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಸಿನಿಮಾ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸಿನಿಮಾ ಟಿಕೆಟ್ ದರ 200 ರೂ. ಗಳಿಗೆ ನಿಗದಿಪಡಿಸಿದ್ದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೊಂಬಾಳೆ,‌ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು‌. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರವಿ ಹೊಸಮನಿ ಅವರ ನೇತೃತ್ವದ ಪೀಠವು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜೊತೆಗೆ ವಿಚಾರಣೆಯನ್ನು ಮುಂದೂಡಿದೆ.

ಕರ್ನಾಟಕ ಕಾಂಗ್ರೆಸ್‌ ಸರ್ಕಾರವು ‘ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು-2025’ ಅನ್ನು ಇತ್ತೀಚೆಗೆ ಜಾರಿಗೆ ತಂದಿತ್ತು. ಈ ನಿಯಮದ ಪ್ರಕಾರ, ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಟಿಕೆಟ್ ದರ ಗರಿಷ್ಠ 200 ರೂಪಾಯಿ ನಿಗದಿಪಡಿಸಬೇಕಿತ್ತು. ಆದರೆ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್‌ ಆಫ್‌ ಇಂಡಿಯಾ, ಹೊಂಬಾಳೆ ಫಿಲ್ಮ್ಸ್ಧಿನ ವಿಜಯ್‌ ಕಿರಗಂದೂರು, ಪಿವಿಆರ್‌ ಐನಾಕ್ಸ್‌ ಲಿಮಿಟೆಡ್‌, ವಿಕೆ ಫಿಲಂಸ್‌, ಕೀ ಸ್ಟೋನ್‌ ಎಂಟರ್‌ಟೈನ್ಮೆಂಟ್‌ ಪ್ರೈಧಿವೇಟ್‌ ಲಿಮಿಟೆಡ್‌ ಈ ನಿಯಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಸಿನಿಮಾ ಟಿಕೆಟ್‌ ದರ 200ರೂ.ಗೆ ನಿಗದಿಪಡಿಸಿದ ಸರ್ಕಾರದ ನಿರ್ಧಾರ ಏಕಪಕ್ಷೀಯ, ಕಾನೂನು ಬಾಹಿರಮತ್ತು ವಿವೇಚನಾರಹಿತ ಹಾಗೂ ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಸರ್ಕಾರ 2017ರಲ್ಲಿಯೂ ಇದೇ ರೀತಿಯ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿತ್ತು. ಆ ನಂತರ ಸರ್ಕಾರ ಆದೇಶವನ್ನು ವಾಪಸ್‌ ಪಡೆಯಲಾಗಿತ್ತು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿಏಕರೂಪ ಟಿಕೆಟ್‌ ದರ ನಿಗದಿಪಡಿಸಿ ಸೆ.12 ಅನ್ವಯವಾಗುವಂತೆ ಅಧಿಸೂಚನೆ ಹೊರಡಿಸಿತ್ತು. ಮಲ್ಟಿಪ್ಲೆಕ್ಸ್‌ಗಳು ನಡೆಸುತ್ತಿದ್ದ ದುಬಾರಿ ಟಿಕೆಟ್‌ ದರ ಲೂಟಿಗೆ ಕಡಿವಾಣ ಹಾಕುವ ಹಿನ್ನೆಲೆ, ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ನ ಮೂಲ ಬೆಲೆಯು 200 ರೂ. ದಾಟುವಂತಿಲ್ಲಎಂದು ಹೇಳಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments