Homeಕರ್ನಾಟಕ1.29 ಲಕ್ಷ ಮನೆ ಪೂರ್ಣಗೊಳಿಸಲು ಸಿಎಂ ಒಪ್ಪಿಗೆ, ಆರ್ಥಿಕ ನೆರವು ಒದಗಿಸುವ ಭರವಸೆ

1.29 ಲಕ್ಷ ಮನೆ ಪೂರ್ಣಗೊಳಿಸಲು ಸಿಎಂ ಒಪ್ಪಿಗೆ, ಆರ್ಥಿಕ ನೆರವು ಒದಗಿಸುವ ಭರವಸೆ

ಸರ್ವರಿಗೂ ಸೂರು ಯೋಜನೆ ಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಿರ್ಮಾಣ ದ ವಿವಿಧ ಹಂತದಲ್ಲಿ ಇರುವ 1,29,457 ಮನೆಗಳಿಗೆ ಎಷ್ಟು ಹಣಕಾಸು ಬೇಕಾಗುತ್ತದೆ. ಈ ವರ್ಷ ಗರಿಷ್ಠ ಎಷ್ಟು ಕೊಡಬಹುದು. ಮುಂದಿನ ವರ್ಷ ಎಷ್ಟು ಕೊಡಬಹುದು ಪರಿಶೀಲನೆ ಮಾಡುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದರು.

ಆದರೆ, ಫಲಾನುಭವಿಗಳಿಂದ ಒಂದು ಲಕ್ಷ ರೂ. ಕಡ್ಡಾಯವಾಗಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39, 966 ಮನೆ ಹಂಚಿಕೆಗೆ ಸಿದ್ದ ವಿದ್ದು 862 ಕೋಟಿ ರೂ. ಅಗತ್ಯವಿದೆ. ಅದೇ ರೀತಿ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆ ಸಿದ್ದವಿದ್ದು 1,879 ಕೋಟಿ ರೂ. ಅಗತ್ಯ ವಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಸಭೆಯಲ್ಲಿ ವಿವರಿಸಿದರು.

ಏನಿದು ಯೋಜನೆ?

ಸರ್ವರಿಗೂ ಸೂರು ಯೋಜನೆಯಡಿಯಲ್ಲಿ 2013 ರಿಂದ 2023 ರವರೆಗೆ ಮಂಜೂರು ಮಾಡಿದ್ದ ವಸತಿ ಯೋಜನೆ ಯಡಿ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯ ವಾಗದೆ 2.32 ಲಕ್ಷ ಮನೆಗಳ ನಿರ್ಮಾಣ ನೆನೆಗುದಿಗೆ ಬಿದ್ದಿತು. ಬಡ ಕುಟುಂಬಗಳ ಸಮಸ್ಯೆ ಯನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಯವರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿ ಕುಟುಂಬದ ಫಲಾನುಭವಿ ವಂತಿಗೆ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.

ಈ ಮೊದಲು ಕೊಳಗೇರಿ ಅಭಿವೃದ್ಧಿ ಮಂಡಳಿ ಯೋಜನೆಗೆ ಅನುಮತಿ ದೊರೆತಿತ್ತು. ಬುಧವಾರ ದ ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೂ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.

ಸಭೆಯಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅತೀಕ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹೌಸಿಂಗ್ ಬೋರ್ಡ್ ಅಧ್ಯಕ್ಷ ಶಿವಲಿಂಗೇ ಗೌಡ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕವಿತಾ ಮಣ್ಣಿಕೇರಿ, ಸುಶೀಲಮ್ಮ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments