Homeಕರ್ನಾಟಕಬಿಬಿಎಂಪಿ ವಾರ್ ರೂಂಗೆ ಸಿಎಂ- ಡಿಸಿಎಂ ಭೇಟಿ, ಮಳೆ ಅನಾಹುತಗಳ ಬಗ್ಗೆ ಪರಿಶೀಲನೆ

ಬಿಬಿಎಂಪಿ ವಾರ್ ರೂಂಗೆ ಸಿಎಂ- ಡಿಸಿಎಂ ಭೇಟಿ, ಮಳೆ ಅನಾಹುತಗಳ ಬಗ್ಗೆ ಪರಿಶೀಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಹಲವು ಪ್ರದೇಶಗಳು ಹಾನಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಅವರು ಸೋಮವಾರ ಬಿಬಿಎಂಪಿ ವಾರ್ ರೂಂಗೆ (ICCC) ಭೇಟಿ ನೀಡಿ ಆಡಳಿತಗಾರ ತುಷಾರ್ ಗಿರಿನಾಥ್ ಅವರಿಂದ ವಿವರ ಮಾಹಿತಿ ಪಡೆದುಕೊಂಡರು.

ಅನಂತದ ವರ್ಚ್ಯುವಲ್ ಸಭೆ (VC) ಮೂಲಕ ಸಾಯಿ ಲೇಔಟ್, ಮಾನ್ಯತಾ ಟೆಕ್ ಪಾರ್ಕ್ ಹಾಗೂ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಆಗಿರುವ ಸಮಸ್ಯೆಗಳನ್ನು ವೀಕ್ಷಿಸಿ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳಿಂದ ಮೂಲಕ ಮಾಹಿತಿ ಪಡೆದುಕೊಂಡರು.

ಮೊದಲಿಗೆ, ಸಾಯಿ ಲೇಔಟ್ ನಲ್ಲಿ ಆಗಿರುವ ಸಮಸ್ಯೆಗಳನ್ನು ಆಲಿಸಿ, ಗೆದ್ದಲಹಳ್ಳಿ ರೈಲ್ವೆ ಸೇತುವೆಯ ಅಗಲೀಕರಣ ಮಾಡಲಾಗುವುದು. ಜೊತೆಗೆ ಸದ್ಯ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಸ್ಥಳೀಯ ನಿವಾಸಿಗಳಿಗೆ ಭರವಸೆ ನೀಡಿದರು.

ಮಾನ್ಯತಾ ಟೆಕ್ ಪಾರ್ಕ್ ಪ್ರದೇಶದಲ್ಲಿನ ರಾಜಕಾಲುವೆಗೆ ನೇರವಾಗಿ ಸಂಪರ್ಕಿಸುವ ಪ್ರತ್ಯೇಕ ಮತ್ತೊಂದು ರಾಜಕಾಲುವೆಯನ್ನು ನಿರ್ಮಿಸಬೇಕಿದ್ದು, ವಿಪತ್ತು ನಿರ್ವಹಣೆ ಅಡಿ ಕೂಡಲೆ ಕಾಮಗಾರಿಯನ್ನಯ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆಯು ಜಾಲಾವೃತವಾಗಲಿದೆ. ರಸ್ತೆಯಲ್ಲಿ ನಿಂತಿರುವ ನೀರಿನ ಮಟ್ಟವನ್ನು ಕಡಿಮೆ ಮಾಡಲು ರಾಜಕಾಲುವೆ ನೀರು ಹರಿದು ಹೋಗಲು ಜೆಸಿಬಿ ಮೂಲಕ ವೆಂಟ್ ಮಾಡಲಾಗಿದೆ. ಈ ಸ್ಥಳದಲ್ಲಿ ಮೆಟ್ರೋ ವತಿಯಿಂದ ಸಮಗ್ರವಾಗಿ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ರಾಜಕಾಲುವೆಗಳನ್ನು ಪುನರ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments