Homeಕರ್ನಾಟಕಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡ ಸಿಎಂ, ಡಿಸಿಎಂ

ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡ ಸಿಎಂ, ಡಿಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡರು.

ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವರು ಉಪಸ್ಥಿತರಿದ್ದರು.

ನನ್ನ ಸಹೋದರಿಗಿಂತ ಉತ್ತಮರನ್ನು ಊಹಿಸಿಕೊಳ್ಳಲಾರೆ: ರಾಹುಲ್‌ ಗಾಂಧಿ

ವಯನಾಡ್‌ನ ಜನರಿಗೆ ನನ್ನ ಹೃದಯದಲ್ಲಿ ಬಹಳ ವಿಶೇಷವಾದ ಸ್ಥಾನವಿದೆ. ಆ ಜನರನ್ನು ಪ್ರತಿನಿಧಿಸಲು ನನ್ನ ಸಹೋದರಿಗಿಂತ ಉತ್ತಮರನ್ನು ನಾನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಯುಡಿಎಫ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳವಾರ ರಾಹುಲ್ ಹಾಗೂ ಪ್ರಿಯಾಂಕಾ ಕೇರಳಕ್ಕೆ ತೆರಳಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments