Homeಕರ್ನಾಟಕರಾಯಣ್ಣ ವಸ್ತು ಸಂಗ್ರಹಾಲಯ ಲೋಕಾರ್ಪಣೆಗೊಳಿಸಿದ ಸಿಎಂ

ರಾಯಣ್ಣ ವಸ್ತು ಸಂಗ್ರಹಾಲಯ ಲೋಕಾರ್ಪಣೆಗೊಳಿಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರಾಂತಿವೀರ ಸಂಗೊಳ್ಳಿರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಭೇಟಿ ನೀಡಿ ವೀರಭೂಮಿಯಲ್ಲಿನ ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ರಾಯಣ್ಣನ ಅಭಿಮಾನಿಗಳು ಮುಖ್ಯಮಂತ್ರಿಗಳ ಹಣೆಗೆ ಭಂಡಾರ ಹಚ್ಚುವ ಮೂಲಕ ಅಭಿಮಾನ ಮೆರೆದರು.‌ ಬಳಿಕ ನಾನಾ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಗ್ಯಾರಂಟಿ ಅನುಷ್ಠಾನ‌ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳು, ವಿಧಾನ‌ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಗೂ ರಾಯಣ್ಣ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments