Homeಕರ್ನಾಟಕಸಿಎಂ ಜನಸ್ಪಂದನ | 12, 372 ಅರ್ಜಿ ಸ್ವೀಕಾರ; ಕಂದಾಯ ಇಲಾಖೆಯದ್ದೇ ಸಿಂಹ ಪಾಲು

ಸಿಎಂ ಜನಸ್ಪಂದನ | 12, 372 ಅರ್ಜಿ ಸ್ವೀಕಾರ; ಕಂದಾಯ ಇಲಾಖೆಯದ್ದೇ ಸಿಂಹ ಪಾಲು

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12,372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.

ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು

ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ – ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.

ಒಂದು ತಿಂಗಳೊಳಗೆ ಅಹವಾಲು ಬಗೆಹರಿಸಿ: ಸಿಎಂ

ಎರಡನೇ ಜನಸ್ಪಂದನದ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, “ಇಂದಿನ ಜನ ಸ್ಪಂದನೆಯಲ್ಲಿ 12,372 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ” ಎಂದರು.

“ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ” ಎಂದು ಹೇಳಿದರು.

“ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು” ಎಂದು ಸಿಎಂ ಸೂಚಿಸಿದರು

“ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments