ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ “ಅಶ್ವಮೇಧ” ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸೋಮವಾರ ಲೋಕಾರ್ಪಣೆಗೊಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸ ‘ಅಶ್ವಮೇಧ’ ಕ್ಲಾಸಿಕ್ ಪ್ರಯಾಣದ ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳನ್ನು ಪರಿಚಯಿಸಲಾಗಿದ್ದು ಪ್ರಯಾಣಿಕರಿಗೆ ಅನುಕೂಲವಾಗಲಿವೆ.
ಕೆ.ಎಸ್.ಆರ್.ಟಿ.ಸಿ ಸಂಸ್ಥೆಯಿಂದ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುಖಕರ ಪ್ರಯಾಣದ ಅನುಭವ ಒದಗಿಸುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಶ್ವಮೇಧ ನಮ್ಮ ಇನ್ನೊಂದು ವಿನೂತನ ಪ್ರಯತ್ನವಾಗಿದೆ” ಎಂದು ಕೆ.ಎಸ್.ಆರ್.ಟಿ.ಸಿ ಹೇಳಿಕೊಂಡಿದೆ.