Homeಕರ್ನಾಟಕಕೆಎಎಸ್‌ ಮರುಪರೀಕ್ಷೆ ನಡೆಸಲು ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕೆಎಎಸ್‌ ಮರುಪರೀಕ್ಷೆ ನಡೆಸಲು ಕೆಪಿಎಸ್‌ಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, “ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

“ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments