Homeಕರ್ನಾಟಕಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ, ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ, ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಅವರ ನಡುವಿನ ಸಂಭಾಷಣೆ ಕುರಿತು ತನಿಖೆಗೆ ಆದೇಶಿಸಿ, ಪ್ರಾಮಾಣಿಕರು ಎನ್ನುವುದನ್ನು ಸಾಬೀತು ಮಾಡಲಿ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ದಾಖಲೆ ಬಿಡುಗಡೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳು, “ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ” ಎಂದು ತಿಳಿಸಿದ್ದಾರೆ.

” ‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ” ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments