Homeಕರ್ನಾಟಕಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕರಾಳ ಕತೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕರಾಳ ಕತೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ ಜಿಎಸ್‌ಟಿ ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು.

ತಿ ನರಸೀಪುರದಲ್ಲಿ ಮಾತನಾಡಿದ ಅವರು, “ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ” ಎಂದರು.

“ಆದರೆ ಕೇಂದ್ರ ಸರ್ಕಾರ ಪ್ರತಿ ಮನೆಗೆ 18% ಜಿಎಸ್‌ಟಿ ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು ಜಿಎಸ್‌ಟಿ ಹೆಸರಲ್ಲಿ ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಳ್ಳುತ್ತದೆ. ಅಂದರೆ, ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ ಒಂದು ಲಕ್ಷದ 38 ಸಾವಿರ ರೂಪಾಯಿ ವಾಪಾಸ್ ವಸೂಲಿ ಮಾಡಿದರೆ ಕೇಂದ್ರ ಸರ್ಕಾರ ಎಷ್ಟು ಕೊಟ್ಟಂಗಾಯ್ತು? ಬರೀ 12 ಸಾವಿರ ರೂಪಾಯಿ ಮಾತ್ರ. ಬರೀ 12 ಸಾವಿರ ಕೊಟ್ಟು ಅದಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಕೊಳೆಗೇರಿ ನಿವಾಸಿಗಳಿಂದಲೂ 18% ಜಿಎಸ್‌ಟಿ ಸುಲಿಗೆ ಮಾಡುವ ಈ ಕ್ರಮ ನನಗೆ ಬಹಳ ಬೇಸರ ಆಯಿತು. ಹೀಗಾಗಿ ಪ್ರತಿ ಫಲಾನುಭವಿಗಳು ಕಟ್ಟಬೇಕಿದ್ದ ಅವರ ಪಾಲಿನ 3 ಲಕ್ಷ 80 ಸಾವಿರ ರೂಪಾಯಿಯಲ್ಲಿ ಒಂದು ಲಕ್ಷ ಮಾತ್ರ ಅವರಿಂದ ಕಟ್ಟಿಸಿಕೊಂಡು ಉಳಿದ ಹಣವನ್ನು ನಮ್ಮ ಸರ್ಕಾರದಿಂದಲೇ ಕಟ್ಟಿಸಲು ನಾನು ನಿರ್ಧರಿಸಿದೆ” ಎಂದರು.

ಹೀಗಾಗಿ ಪ್ರತಿ ಕೊಳೆಗೇರಿ ಮನೆಗೆ 4 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ನಮ್ಮ ರಾಜ್ಯ ಸರ್ಕಾರ ಕಟ್ಟತ್ತೆ. ಕೇಂದ್ರ ಸರ್ಕಾರದ ಪಾಲು ಕೇವಲ 12 ಸಾವಿರ ರೂಪಾಯಿ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಇದು ವಂಚನೆ ಅಲ್ವಾ ? ಇದು ಅನ್ಯಾಯ ಅಲ್ವಾ ? ಈ ಅನ್ಯಾಯಕ್ಕೆ ಮೋದಿ ಸರ್ಕಾರಕ್ಕೆ ಮತ ಹಾಕಬೇಕಾ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments