Homeಕರ್ನಾಟಕಅಸಮಾನತೆ ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು: ಸಿಎಂ ಸಿದ್ದರಾಮಯ್ಯ

ಅಸಮಾನತೆ ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು: ಸಿಎಂ ಸಿದ್ದರಾಮಯ್ಯ

ಶೂದ್ರ ಮತ್ತು ಮಹಿಳೆಯರನ್ನು ಶತ-ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು” ಎಂದರು.

“ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮ ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದು ಹೇಳಿದರು.

“9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು. ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ” ಎಂದರು.

“ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು” ಎಂದು ಕರೆ ನೀಡಿದರು.

“ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದರು.

ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಆಹಾರ ಸಚಿವ ಕೆ ಹೆಚ್ ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments