Homeಕರ್ನಾಟಕಹನುಮ ಧ್ವಜ ತೆರವು ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಉದ್ಧಟತನ ತೋರಿದೆ: ಎಚ್‌ ಡಿ ಕುಮಾರಸ್ವಾಮಿ

ಹನುಮ ಧ್ವಜ ತೆರವು ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಉದ್ಧಟತನ ತೋರಿದೆ: ಎಚ್‌ ಡಿ ಕುಮಾರಸ್ವಾಮಿ

ಕೆರಗೋಡು ಗ್ರಾಮದಲ್ಲಿನ ಧ್ವಜ ಸಂಘರ್ಷಕ್ಕೆ ಸರಕಾರವೇ ಕಾರಣವಾಗಿದೆ. ಮಂಡ್ಯ ಜಿಲ್ಲಾಧಿಕಾರಿಯನ್ನು ಮೊದಲು ಅಮಾನತ್ತು ಮಾಡಿ ಇಲ್ಲಿಂದ ಹೊರಗೆ ಕಳುಹಿಸಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೇಸರಿ ಶಾಲು ಧರಿಸಿ ಭಾಗಿಯಾಗಿದ ಕುಮಾರಸ್ವಾಮಿ, ಜೈ ಶ್ರೀರಾಮ್ ಘೋಷಣೆಯೊಂದಿಗೆ ಭಾಷಣ ಆರಂಭಿಸಿದರು.

ಹನುಮ ಧ್ವಜ ತೆರವು ವಿಚಾರದಲ್ಲಿ ಕಾಂಗ್ರೆಸ್ ಸರಕಾರದ ಉದ್ಧಟತನವನ್ನು ತೋರಿಸುತ್ತಿದೆ. ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಚಾರ್ಜ್​ ವೇಲೆ ಒಬ್ಬರ ಕಣ್ಣಿಗೆ ಏಟು ಬಿದ್ದಿದೆ. ಕಣ್ಣು ಹೋಗಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಣ್ಣು ತಂದು ಕೊಂಡುತ್ತಿತ್ತಾ? ಪೊಲೀಸರೇ ಎಚ್ಚರವಾಗಿರಿ. ಎಷ್ಟು ದಿನ ನಿಮ್ಮ ಆಟ ನಡೆಯುತ್ತದೆ ನಾನು ನೋಡುತ್ತೇನೆ” ಎಂದು ಎಚ್ಚರಿಸಿದರು.

“ಹನುಮಂತನ‌ ಕೆಣಕ್ಕಿದ್ದಕ್ಕೆ ಲಂಕ ದಹನವಾಯ್ತು. ಅದೇ ರೀತಿ ನಿಮ್ಮ ಅವನತಿ ಆಗುತ್ತದೆ. ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದರೆ ಸಾಲದು, ನಿಮ್ಮಲ್ಲಿ ರಾಮನ ನಡವಳಿಕೆ ಇರಬೇಕು. ಇಲ್ಲಿ ನಡೆದಿರುವ ಲಾಠಿ ಚಾರ್ಜ್ ಸರಕಾರದ ರಾಕ್ಷಸಿ ಪ್ರವೃತ್ತಿ ತೋರಿಸುತ್ತದೆ” ಎಂದು ಟೀಕಿಸಿದರು.

“ಅಧಿಕಾರದ ಅಮಲಿನಲ್ಲಿ ದೈಹಿಕ ಹಲ್ಲೆ ಮಾಡಿಸಿದ್ದೀರಿ. ಈ ಹೋರಾಟ ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರಿಗೆ ದೈಹಿಕವಾಗಿ ಪೆಟ್ಟು ಕೊಟ್ಟಿದ್ದೀರಿ. ಇದಕ್ಕೆ ಅಧಿಕಾರಿಗಳಿಗೆ ಪ್ರಾಯಶ್ಚಿತ್ತವಾಗಲೇಬೇಕು. ಸಿದ್ದರಾಮಯ್ಯ ಸರಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ. ನಿಮ್ಮ ತಪ್ಪು ತಿದ್ದಿಕೊಳ್ಳಿ” ಎಂದರು.

“ನಮ್ಮದು ರಾಜಕೀಯ ಲಾಭ ನಷ್ಟದ ಹೋರಾಟವಲ್ಲ. ಧ್ವಜ ಸ್ಥಂಭ ವಿಚಾರದಲ್ಲಿ ಸುಳ್ಳು ದಾಖಲೆ ಸೃಷ್ಟಿಯಾಗಿದೆ. ಅಧಿಕಾರಿಗಳ ಮೂಲಕ ಉದ್ಧಟತನ ತೋರಿಸುತ್ತಿದ್ದಾರೆ. ಅಧಿಕಾರಿಗಳು ತಕ್ಷಣ ಕೆರಗೋಡಿನಲ್ಲಿ ಶಾಂತಿ ಸಭೆ ಕರೆಯಬೇಕು. ಧ್ವಜದ ಮರು ಸ್ಥಾಪನೆ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಇರುತ್ತದೆ. 144 ಸೆಕ್ಷನ್ ಮೊದಲು ಕಿತ್ತುಹಾಕಿ. ಜನರು ಕೆರಳಿದರೆ ಪೊಲೀಸರಿಂದ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments