ಗಂಗೇನಹಳ್ಳಿ ಡಿನೋಟಿಫಿಕೇಷನ್ ವಿಚಾರವಾಗಿ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನನ್ನು ಈವರೆಗೂ ಯಾರೂ ಸಂಪರ್ಕಿಸಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ” ನಾನು ಕದ್ದು ಹೋಗಲ್ಲ, ಈ ಕ್ಷಣದವರೆಗೆ ನನ್ನ ಜೊತೆ ಯಾರೂ ಮಾತನಾಡಿಲ್ಲ. ಈ ಸರಕಾರದಲ್ಲಿ ನನ್ನ ಬಗ್ಗೆ ಸುಳ್ಳು ಹೇಳಿಕೆ, ಅಪಪ್ರಚಾರ ನಡೆಯುತ್ತಿದೆ” ಎಂದು ಆರೋಪಿಸಿದರು.
“ಹರಿಯಾಣದ ಗೋಹನಾದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಮೋದಿ ಮಾತನಾಡಿದ್ದರಲ್ಲಿ ತಪ್ಪಿಲ್ಲ. ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟು ಹಾಕಿದ್ದು ಮತ್ತು ಪೋಷಿಸಿದ್ದೇ ಕಾಂಗ್ರೆಸ್. ಇದಕ್ಕೆ ಅನೇಕ ಉದಾಹರಣೆಗಳಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಕೇವಲ ಎರಡು ವರ್ಷಗಳಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಭೂಹಗರಣದಲ್ಲಿ ಸಿಲುಕಿದ್ದಾರೆ ಎಂದಿದ್ದರು” ಎಂದು ಸಮರ್ಥಿಸಿಕೊಂಡರು.
“ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಆರೋಪ ಮಾಡಿತ್ತು. ಕಾಂಗ್ರೆಸ್ನಲ್ಲಿ 40 ಪರ್ಸೆಂಟ್ಗೂ ಹೆಚ್ಚು ಕಮಿಷನ್ ಕೇಳ್ತಾರಂತೆ ಎಂಬ ಆರೋಪ ನಂತರ ಕೇಳಿಬಂತು. ಈ ಬಗ್ಗೆ ತುಮಕೂರಿನಲ್ಲಿ ಗುತ್ತಿಗೆದಾರರೊಬ್ಬರು ಹೇಳಿದ್ದಾರೆ” ಎಂದರು.