Homeಕರ್ನಾಟಕಐದು ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ಗೆ ಆತ್ಮವಿಶ್ವಾಸವೇ ಇಲ್ಲ: ಭೂಪೇಂದ್ರ ಯಾದವ್

ಐದು ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ಗೆ ಆತ್ಮವಿಶ್ವಾಸವೇ ಇಲ್ಲ: ಭೂಪೇಂದ್ರ ಯಾದವ್

ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರಿಗೆ ವಂಚಿಸುತ್ತಿದೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆರೋಪಿಸಿದರು.

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಐದು ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್‌ಗೆ ಆತ್ಮವಿಶ್ವಾಸವೇ ಇಲ್ಲವಾಗಿದೆ” ಎಂದರು.

“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತದಲ್ಲೂ ಜಯಿಸಲಿದೆ. ಬಳಿಕ ರಾಜ್ಯದಲ್ಲಿ ಕಮಲ ಅರಳುವುದು ಗ್ಯಾರಂಟಿ. ಪಶ್ಚಿಮ ಬಂಗಾಳ ಹಾಗೂ ಬಿಹಾರದ ಬೆಳವಣಿಗೆಯಿಂದ ಕಾಂಗ್ರೆಸ್ ಮತ್ತಷ್ಟು ಕುಗ್ಗಿದೆ” ಎಂದು ಹೇಳಿದರು.

ನಮಗೆ ಮೋದಿಯೇ ಗ್ಯಾರಂಟಿ

ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮಾತನಾಡಿ, “ನಮಗೆ ಮೋದಿಯೇ ಗ್ಯಾರಂಟಿ. ಹತ್ತು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ ರೈಲ್ವೆ, ಹೆದ್ದಾರಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ” ಎಂದರು.

“2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಸೇರಿದಂತೆ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments