Homeಕರ್ನಾಟಕಸಂವಿಧಾನ ದಿನ: ಅಂಬೇಡ್ಕರ್ ಪ್ರತಿಮೆಗೆ ಸಿಎಂ, ಡಿಸಿಎಂ, ಸಚಿವ ಮುನಿಯಪ್ಪರಿಂದ ಪುಷ್ಪ ನಮನ

ಸಂವಿಧಾನ ದಿನ: ಅಂಬೇಡ್ಕರ್ ಪ್ರತಿಮೆಗೆ ಸಿಎಂ, ಡಿಸಿಎಂ, ಸಚಿವ ಮುನಿಯಪ್ಪರಿಂದ ಪುಷ್ಪ ನಮನ

ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಶಾಸಕರಾದ ಅಶೋಕ್ ಪಟ್ಟಣ, ಬೇಳೂರು ಗೋಪಾಲಕೃಷ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments