Homeಕರ್ನಾಟಕಮುಂದುವರಿದ ಮಳೆ | ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ

ಮುಂದುವರಿದ ಮಳೆ | ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಬುಧವರಾ (ಅ.23) ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರು ಆದೇಶಿಸಿದ್ದಾರೆ.

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments