ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ
ಅವರನ್ನು ಜೂನ್ 6ರ ತನಕ ಆರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಎಪ್ರಿಲ್ 28ರಂದು ದೇಶಬಿಟ್ಟು ಪಲಾಯನಗೈದಿದ್ದ ಪ್ರಜ್ವಲ್ 35 ದಿನಗಳ ಬಳಿಕ ಜರ್ಮನಿಯಿಂದ ನಗರದ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12.50 ಗಂಟೆಗೆ ಸುಮಾರಿಗೆ ಬಂದಿಳಿದಿದ್ದರು. ಕೂಡಲೇ ಇಮಿಗ್ರೇಶನ್ ಅಧಿಕಾರಿಗಳು ಮತ್ತು ಸಿಐಎಸ್‌ಎಫ್ ಪಡೆಗಳು ಆತನನ್ನು ಬಂಧಿಸಿ ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಿದ್ದರು.
ಶುಕ್ರವಾರ ಪ್ರಜ್ವಲ್ ರೇವಣ್ಣ ಅವರ ಮೆಡಿಕಲ್ ಚೆಕಪ್ ನಡೆಸಿರುವ ಎಸ್‌ಐಟಿ ಅಧಿಕಾರಿಗಳು ಬಳಿಕ ಕೋರ್ಟ್ ಗೆ ಹಾಜರುಪಡಿಸಿದರು. ಮಹಿಳಾ ಪೊಲೀಸ್ ಅಧಿಕಾರಿ ಸುಮನ್ ಡಿ ಪೆನ್ನೇಕರ್ ಮತ್ತು ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನು ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಿದರು. ಇದಕ್ಕೂ ಮುನ್ನ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಸಂಪೂರ್ಣವಾಗಿ ವೈದ್ಯಕೀಯ ತಪಾಸಣೆ ಮಾಡಲಾಯಿತು.