Homeಕರ್ನಾಟಕವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸಿ ಪಿ ಯೋಗೇಶ್ವರ್?‌

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸಿ ಪಿ ಯೋಗೇಶ್ವರ್?‌

ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಕೈ ತಪ್ಪುವ ಆತಂಕದಲ್ಲಿರುವ ಸಿ ಪಿ ಯೋಗೇಶ್ವರ್‌ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಚನ್ನಪಟ್ಟಣ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಭೇಟಿಯಾಗಿದ್ದಾರೆಂಬ ಆರೋಪ ಸಂಬಂಧ ಮಾಧ್ಯಮಗಳಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿ, “ನನ್ನ ಮೇಲೆ ಅನವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಹೆಚ್​​ಡಿಕೆ ನನಗೆ ಟಿಕೆಟ್ ಕೊಡದಿದ್ದರೆ ಅವರ ಮಗನಿಗೆ ಕೊಡಲಿ. ಆದರೆ, ಕಾಂಗ್ರೆಸ್ಸಿಗರ ಭೇಟಿ ಮಾಡಿದ್ದೆ ಎಂಬ ಆರೋಪ ಮಾಡುವುದು ಸರಿಯಲ್ಲ” ಎಂದರು.

“ನಾನು ಈವರೆಗೂ ಕಾಂಗ್ರೆಸ್​ನ ಯಾವ ನಾಯಕರನ್ನೂ ಭೇಟಿಯಾಗಿಲ್ಲ. ಕಾಂಗ್ರೆಸ್​ ನಾಯಕರ ಭೇಟಿ ಮಾಡಿದರೂ ತಪ್ಪೇನಿಲ್ಲ. ಆದರೆ ಇಲ್ಲಿಯವರೆಗೆ ಕಾಂಗ್ರೆಸ್​ನ ಯಾರನ್ನೂ ಭೇಟಿ ಮಾಡಿಲ್ಲ” ಎಂದು ಹೇಳಿದರು.

“ಅವಕಾಶ ಕೊಟ್ಟರೆ ಎನ್​ಡಿಎ ಅಭ್ಯರ್ಥಿ ಆಗುತ್ತೇನೆ, ಅವಕಾಶ ಸಿಗಬೇಕಷ್ಟೇ. ನಾನು, ನನ್ನ ಪಾರ್ಟನರ್ ಕುಮಾರಸ್ವಾಮಿ 3 ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್​ ‌ಚಿಹ್ನೆಯಿಂದ ಸ್ಪರ್ಧೆ ಮಾಡಿದರೆ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂದು ಆಸೆ ಇದೆ. ಆದರೆ, ಕುಮಾರಸ್ವಾಮಿಗೆ ಮಗನಿಗೆ ಟಿಕೆಟ್ ಕೊಡಬೇಕೆಂಬ ಮನಸ್ಸಿದೆ. ಅವರ ಮನಸ್ಸಿನಲ್ಲಿ ಆ ರೀತಿ ಇದ್ದರೆ ಏನು ಮಾಡಲಾಗುತ್ತದೆ” ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ವಿರುದ್ಧ ಯೋಗೇಶ್ವರ್ ಅಸಮಾಧಾನ

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂಬ ಯಡಿಯೂರಪ್ಪ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಯೋಗೇಶ್ವರ್, “ಈ ಸಂದರ್ಭದಲ್ಲಿ ಯಡಿಯೂರಪ್ಪ ಆ ಹೇಳಿಕೆ ಕೊಡುವ ಅಗತ್ಯ ಇರಲಿಲ್ಲ. ಅವರು ಉದ್ದೇಶಪೂರ್ವಕ ಹೇಳಿಕೆ ಕೊಟ್ಟಿದ್ದಾರೆ. ಅವರ ಮೂಲಕ ಯಾರೋ ಈ ರೀತಿ ಹೇಳಿಕೆ ಕೊಡಿಸಿದ್ದಾರೆ. ಯಡಿಯೂರಪ್ಪ ಅವರನ್ನು ದೂರುವುದರಲ್ಲಿ ಅರ್ಥ ಇಲ್ಲ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments