Homeಕರ್ನಾಟಕವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್‌ ರಾಜೀನಾಮೆ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್‌ ರಾಜೀನಾಮೆ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಸಿ ಪಿ ಯೋಗೇಶ್ವರ್‌ ಅವರು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸಂಜೆ ನಾಲ್ಕು ಗಂಟೆಗೆ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಪಕ್ಷೇತರ ಅಥವಾ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಯೋಚಿಸಿಲ್ಲ: ಸಿ ಪಿ ಯೋಗೇಶ್ವರ್

ಚನ್ನಪಟ್ಟಣ ಉಪ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸಿ ಪಿ ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

“ಈ ಭಾಗದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದೇನೆ” ಎಂದರು.

“ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಈ ಕ್ಷಣದವರೆಗೆ ನಿರ್ಧರಿಸಿಲ್ಲ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ನಾಳೆ ನಮ್ಮ ಕಾರ್ಯಕರ್ತರ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸಲು ನನ್ನ ಮೊದಲ ಆದ್ಯತೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುಕೂಲವಾಗಲೆಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವು ಪರಸ್ಪರ ವಿರೋಧಿಸಿಕೊಂಡೇ ಬೆಳೆದವರು. ಇದಕ್ಕೆ ಜೆಡಿಎಸ್‌ ಕಾರ್ಯಕರ್ತರ ವಿರೋಧ ಕೂಡ ಇದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments